ಐಸಿಸಿ ವಿಶ್ವಕಪ್: ಪಾಕಿಸ್ತಾನಕ್ಕೆ ಮತ್ತೆ ಸೋಲು, 1 ವಿಕೆಟ್ ನಿಂದ ದಕ್ಷಿಣ ಆಫ್ರಿಕಾಕ್ಕೆ ರೋಚಕ ಗೆಲುವು
ಚೆಪಾಕ್ ನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಐಸಿಸಿ ವಿಶ್ವಕಪ್ 2023ರ 26ನೇ ಪಂದ್ಯದಲ್ಲಿ ಪಾಕಿಸ್ತಾನ ಮತ್ತೆ ಸೋತಿದ್ದು, ದಕ್ಷಿಣ ಆಫ್ರಿಕಾ 1 ವಿಕೆಟ್ ನಿಂದ ಗೆಲುವು ಸಾಧಿಸಿದೆ. ಈ ಮೂಲಕ ಪಾಕ್ ಸೆಮಿಫೈನಲ್ ಹಾದಿ ಕಷ್ಟ ಎಂಬಂತಾಗಿದೆ.

ಚೆನ್ನೈ: ಚೆಪಾಕ್ ನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಐಸಿಸಿ ವಿಶ್ವಕಪ್ 2023ರ 26ನೇ ಪಂದ್ಯದಲ್ಲಿ ಪಾಕಿಸ್ತಾನ ಮತ್ತೆ ಸೋತಿದ್ದು, ದಕ್ಷಿಣ ಆಫ್ರಿಕಾ 1 ವಿಕೆಟ್ ನಿಂದ ಗೆಲುವು ಸಾಧಿಸಿದೆ. ಈ ಮೂಲಕ ಪಾಕ್ ಸೆಮಿಫೈನಲ್ ಹಾದಿ ಕಷ್ಟ ಎಂಬಂತಾಗಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 46.4 ಓವರ್ ಗಳಲ್ಲಿ 270 ರನ್ ಗಳಿಗೆ ಆಲೌಟ್ ಆಯಿತು. ನಾಯಕ ಬಾಬರ್ ಅಜಮ್ ಹಾಗೂ ಸೌದ್ ಶಕೀಲ್ ಅವರ ಅರ್ಧಶತಕ ಹಾಗೂ ಶದಬ್ ಖಾನ್ ಅವರ 43 ರನ್ ಗಳಿಸಿದ್ದು ಹೊರತುಪಡಿಸಿದರೆ ಬೇರೆ ಯಾವುದೇ ಆಟಗಾರು ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲ್ಲಲಿಲ್ಲ. ಇದರಿಂದಾಗಿ 46.4 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು ದಕ್ಷಿಣ ಆಫ್ರಿಕಾ ಗೆಲ್ಲಲು 271 ರನ್ ಗಳ ಗುರಿ ನೀಡಿತು. ದಕ್ಷಿಣ ಆಫ್ರಿಕಾ ಪರ ತಬ್ರೈಜ್ ಶಾಮ್ಸಿ 4, ಮಾರ್ಕೊ ಜಾನ್ ಸೇನ್ 3, ಗೆರಾಲ್ಡ್ ಕೊಯ್ಜಿ 2 ವಿಕೆಟ್ ಪಡೆದರು.
ಪಾಕಿಸ್ತಾನ ನೀಡಿದ 271 ರನ್ ಗಳ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ ಪರ ಐಡೆನ್ ಮಾರ್ಕ್ರಾಮ್ ಅದ್ಬುತವಾಗಿ ಬ್ಯಾಟಿಂಗ್ ಮಾಡಿದರು. 93 ಎಸೆತಗಳಲ್ಲಿ 3 ಸಿಕ್ಸರ್, 7 ಬೌಂಡರಿಗಳೊಂದಿಗೆ 91 ರನ್ ಗಳಿಸುವ ಮೂಲಕ ತಂಡ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದರು.
ಮಾರ್ಕ್ರಾಮ್ ಹೊರತುಪಡಿಸಿದರೆ ಬೇರೆ ಯಾವುದೇ ಆಟಗಾರರು ಉತ್ತಮ ರನ್ ಗಳಿಸುವಲ್ಲಿ ವಿಫಲರಾದರು. ಪರಿಣಾಮವಾಗಿ 47.2 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 271 ರನ್ ಗಳಿಸುವ ಮೂಲಕ ದಕ್ಷಿಣ ಆಫ್ರಿಕಾ ಗೆಲುವಿನ ನಗೆ ಬೀರಿತು. ದಕ್ಷಿಣ ಆಫ್ರಿಕಾ ಪರ ನಾಲ್ಕು ವಿಕೆಟ್ ಕಬಳಿಸಿದ ತಬ್ರೈಜ್ ಶಾಮ್ಸಿ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


