ವಿಶ್ವಕಪ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 100 ರನ್ ಜಯ; ಅಂಕಪಟ್ಟಿಯಲ್ಲಿ ನಂ.1; ಸೆಮಿಫೈನಲ್ಸ್ ಪ್ರವೇಶಿಸಿದ ಮೊದಲ ತಂಡ
ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧ ಇಂದು ನಡೆದ ಪಂದ್ಯದಲ್ಲಿ ಭಾರತ 100 ರನ್ ಗಳ ಜಯ ಗಳಿಸಿದ್ದು ಇದು ತಂಡದ 6 ನೇ ಗೆಲುವಾಗಿದೆ.

ನವದೆಹಲಿ: ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧ ಇಂದು ನಡೆದ ಪಂದ್ಯದಲ್ಲಿ ಭಾರತ 100 ರನ್ ಗಳ ಜಯ ಗಳಿಸಿದ್ದು ಇದು ತಂಡದ 6 ನೇ ಗೆಲುವಾಗಿದೆ.
ಲಖನೌದಲ್ಲಿ ನಡೆದ ಪಂದ್ಯದಲ್ಲಿ ಭಾರತದ ಬೌಲರ್ ಗಳ ಎದುರು ಇಂಗ್ಲೆಂಡ್ ತಂಡ ಮಂಡಿಯೂರಿತು. 230 ರನ್ ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ 129 ಕ್ಕೆ ಸರ್ವಪತನ ಕಂಡಿತು. ಇದಕ್ಕೂ ಮುನ್ನ, ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಭಾರತ ತಂಡ ನಿಗಧಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 229ರನ್ ಗಳಿಸಿದ್ದು, ಇಂಗ್ಲೆಂಡ್ ಗೆಲ್ಲಲು 230ರನ್ ಗಳ ಸಾಧಾರಣ ಗುರಿ ನೀಡಿತ್ತು
ವಿಶ್ವಕಪ್ ಟೂರ್ನಿಯಲ್ಲಿ ಈ ಗೆಲುವಿನ ಮೂಲಕ ಭಾರತ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೆ ಏರಿದ್ದು, ಸೆಮಿಫೈನಲ್ಸ್ ಪ್ರವೇಶಿಸಿದ ಮೊದಲ ತಂಡವಾಗಿದೆ.
ಭಾರತದ ನಂತರದ ಸ್ಥಾನದಲ್ಲಿ 10 ಅಂಕಗಳೊಂದಿಗೆ ದಕ್ಷಿಣ ಆಫ್ರಿಕಾ ಇದ್ದರೆ, ಅಂಕಪಟ್ಟಿಯಲ್ಲಿ 8 ಅಂಕಗಳನ್ನು ಪಡೆದಿರುವ ನ್ಯೂಜಿಲ್ಯಾಂಡ್ ಮೂರನೇ ಸ್ಥಾನದಲ್ಲಿದೆ. 4,5,6 ರಲ್ಲಿ ಅನುಕ್ರಮವಾಗಿ ಆಸ್ಟ್ರೇಲಿಯಾ, ಶ್ರೀಲಂಕಾ, ಪಾಕಿಸ್ತಾನ ಇದ್ದು, ಈ ಸೋಲಿನೊಂದಿಗೆ ಇಂಗ್ಲೆಂಡ್ 10 ನೇ ಸ್ಥಾನಕ್ಕೆ ಕುಸಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


