ಏಷ್ಯಾ ಕಪ್ 2023: ಪಾಕಿಸ್ತಾನಕ್ಕೆ 267 ರನ್ ಗಳ ಗುರಿ ನೀಡಿದ ಟೀಂ ಇಂಡಿಯಾ!
ಏಷ್ಯಾಕಪ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಪಾಕಿಸ್ತಾನ ಮತ್ತು ಭಾರತ ನಡುವೆ ನಡೆಯುತ್ತಿರುವ ಪಂದ್ಯದಲ್ಲಿ ಟೀಂ ಇಂಡಿಯಾ 266 ರನ್ ಗಳಿಗೆ ಆಲೌಟ್ ಆಗಿದೆ.

ಏಷ್ಯಾಕಪ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಪಾಕಿಸ್ತಾನ ಮತ್ತು ಭಾರತ ನಡುವೆ ನಡೆಯುತ್ತಿರುವ ಪಂದ್ಯದಲ್ಲಿ ಟೀಂ ಇಂಡಿಯಾ 266 ರನ್ ಗಳಿಗೆ ಆಲೌಟ್ ಆಗಿದೆ.
ಶ್ರೀಲಂಕಾದ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಪಾಕಿಸ್ತಾನ ಗೆಲ್ಲಲು 267 ರನ್ ಗಳಿಸಬೇಕಾಗಿದೆ. ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿತು. ತಂಡದ ಪರವಾಗಿ ಹಾರ್ದಿಕ್ ಪಾಂಡ್ಯ (87) ಮತ್ತು ಇಶಾನ್ ಕಿಶನ್ (82) ರನ್ ಬಾರಿಸಿದ್ದು ತಂಡ 250 ರನ್ ಗಡಿ ದಾಟಲು ಸಾಧ್ಯವಾಯಿತು. ಆದರೆ ದುರದೃಷ್ಟವಶಾತ್ ಇಬ್ಬರೂ ತಮ್ಮ ಶತಕಗಳನ್ನು ಪೂರೈಸಲು ಸಾಧ್ಯವಾಗಲಿಲ್ಲ.
ಭಾರತ ಪರ ರೋಹಿತ್ ಶರ್ಮಾ 11, ಶುಭ್ಮನ್ ಗಿಲ್ 10, ವಿರಾಟ್ ಕೊಹ್ಲಿ 4, ಶ್ರೇಯಸ್ ಅಯ್ಯರ್ 14, ರವೀಂದ್ರ ಜಡೇಜಾ 14 ಹಾಗೂ ಜಸ್ ಪ್ರೀತ್ ಬುಮ್ರಾ 16 ರನ್ ಗಳಿಸಿ ಔಟಾಗಿದ್ದಾರೆ. ಪಾಕ್ ಪರ ಶಾಹೀನ್ ಅಫ್ರಿದಿ ನಾಲ್ಕು ವಿಕೆಟ್ ಪಡೆದರೆ, ನಸೀಮ್ ಶಾ ಮತ್ತು ಹ್ಯಾರಿಸ್ ರೌಫ್ ತಲಾ ಮೂರು ವಿಕೆಟ್ ಪಡೆದರು.
ಇನ್ನು 2023ರ ಏಷ್ಯಾಕಪ್ ಅಡಿಯಲ್ಲಿ ನಡೆಯುತ್ತಿದ್ದ ಈ ಪಂದ್ಯ ಮಳೆಯಿಂದಾಗಿ ಎರಡು ಬಾರಿ ಸ್ಥಗಿತಗೊಂಡಿತ್ತು. ಮಳೆ ನಿಂತ ನಂತರ ಪಂದ್ಯ ನಡೆಯುತ್ತಿದೆ. ರೋಹಿತ್ ಶರ್ಮಾ ಭಾರತ ತಂಡದ ನಾಯಕರಾಗಿದ್ದರೆ, ಬಾಬರ್ ಅಜಮ್ ಪಾಕಿಸ್ತಾನವನ್ನು ಮುನ್ನಡೆಸುತ್ತಿದ್ದಾರೆ. ಏಷ್ಯಾಕಪ್‌ನ ಏಕದಿನ ಪಂದ್ಯದಲ್ಲಿ ಈ ಎರಡು ತಂಡಗಳು ನಾಲ್ಕು ವರ್ಷಗಳ ನಂತರ ಮುಖಾಮುಖಿಯಾಗುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


