ಕ್ರಿಕೆಟ್

ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ ನಿಧನ

ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ (49 ವರ್ಷ) ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ ನಿಧನ
ಮಾಜಿ ನಾಯಕ ಹೀತ್ ಸ್ಟ್ರೀಕ್ ನಿಧನ
Published On :

ಹರಾರೆ: ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ (49 ವರ್ಷ) ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. 

ಈ ಬಗ್ಗೆ ಸ್ವತಃ ಹೀತ್ ಸ್ಟ್ರೀಕ್ ಅವರ ಪತ್ನಿ ನಾಡಿನ್ ಸ್ಟ್ರೀಕ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದು, ಅವರ ನಿಧನವನ್ನು ಖಚಿತಪಡಿಸಿದ್ದಾರೆ. ಮೇ ತಿಂಗಳ ಆರಂಭದಲ್ಲಿ, ಸ್ಟ್ರೀಕ್ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದಾರೆ ಮತ್ತು ದಕ್ಷಿಣ ಆಫ್ರಿಕಾದ ಪ್ರಸಿದ್ಧ ಆಂಕೊಲಾಜಿಸ್ಟ್ ಒಬ್ಬರ ಅಡಿಯಲ್ಲಿ "ಚಿಕಿತ್ಸೆ ಪಡೆಯುತ್ತಿದ್ದರು" ಎಂದು ವರದಿಯಾಗಿದೆ.

ಕೆಲವು ವಾರಗಳ ಹಿಂದೆ, ಅವರ ಸಾವಿನ ಸುಳ್ಳು ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹರಡಿತ್ತು. ಅವರ ಮಾಜಿ ಸಹ ಆಟಗಾರ ಹೆನ್ರಿ ಒಲೊಂಗಾ ನಂತರ ಪರಿಶೀಲಿಸದ ಸುದ್ದಿಯನ್ನು ಹಂಚಿಕೊಂಡಿದ್ದಕ್ಕಾಗಿ ಕ್ಷಮೆಯಾಚಿಸಿದ್ದರು.

ಜಿಂಬಾಬ್ವೆ ಪರ 65 ಟೆಸ್ಟ್ ಮತ್ತು 189 ಏಕದಿನ ಪಂದ್ಯಗಳನ್ನಾಡಿರುವ ಸ್ಟ್ರೀಕ್ ಕ್ರಮವಾಗಿ 1990 ಮತ್ತು 2943 ರನ್ ಗಳಿಸಿದ್ದು, ಟೆಸ್ಟ್ ಕ್ರಿಕೆಟ್ ನಲ್ಲಿ 216 ವಿಕೆಟ್ ಮತ್ತು ಏಕದಿನದಲ್ಲಿ 239 ವಿಕೆಟ್ ಗಳನ್ನು ಪಡೆದಿದ್ದಾರೆ ಮತ್ತು ಎರಡೂ ಸ್ವರೂಪಗಳಲ್ಲಿ ಜಿಂಬಾಬ್ವೆಯ ಸಾರ್ವಕಾಲಿಕ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.