ಏಷ್ಯಾ ಕಪ್ 2023 ಸೂಪರ್ 4: ಬಾಂಗ್ಲಾದೇಶವನ್ನು 7 ವಿಕೆಟ್ ಗಳಿಂದ ಮಣಿಸಿದ ಪಾಕಿಸ್ತಾನ!
ಏಷ್ಯಾ ಕಪ್ನ ಸೂಪರ್-4 ಪಂದ್ಯದಲ್ಲಿ ಪಾಕಿಸ್ತಾನ ತಂಡ ಬಾಂಗ್ಲಾದೇಶವನ್ನು 7 ವಿಕೆಟ್ ಗಳಿಂದ ಮಣಿಸಿದೆ.

ಏಷ್ಯಾ ಕಪ್ನ ಸೂಪರ್-4 ಪಂದ್ಯದಲ್ಲಿ ಪಾಕಿಸ್ತಾನ ತಂಡ ಬಾಂಗ್ಲಾದೇಶವನ್ನು 7 ವಿಕೆಟ್ ಗಳಿಂದ ಮಣಿಸಿದೆ.
ಬಾಂಗ್ಲಾದೇಶ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದು 193 ರನ್ಗಳಿಗೆ ಆಲೌಟ್ ಆಯಿತು. ಇತ್ತ 194 ರನ್ ಗಳ ಸುಲಭ ಗುರಿಯನ್ನು ಬೆನ್ನಟ್ಟಿದ ಪಾಕಿಸ್ತಾನವು 63 ಎಸೆತಗಳು ಬಾಕಿ ಇರುವಂತೆಯೇ ಪಂದ್ಯವನ್ನು ಸುಲಭವಾಗಿ ಗೆದ್ದುಕೊಂಡಿತು.
ಏಷ್ಯಾ ಕಪ್ 2023ರ ಮೊದಲ ಸೂಪರ್-4 ಪಂದ್ಯದಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಮುಖಾಮುಖಿಯಾಗಿತ್ತು. ಬಾಂಗ್ಲಾದೇಶ ಪರ ನಾಯಕ ಶಕೀಬ್ ಅಲ್ ಹಸನ್ ಮತ್ತು ಮುಶ್ಫಿಕರ್ ರಹೀಮ್ ಅರ್ಧಶತಕ ಗಳಿಸಿದರು. ಇವರಿಬ್ಬರು ಐದನೇ ವಿಕೆಟ್ಗೆ 100 ರನ್ ಸೇರಿಸಿದರು. ಇದೇ ವೇಳೆ ಪಾಕ್ ಪರ ಹ್ಯಾರಿಸ್ ರೌಫ್ 4, ನಸೀಮ್ ಶಾ 3 ಹಾಗೂ ಶಾಹೀನ್ ಅಫ್ರಿದಿ, ಫಹೀಮ್ ಅಶ್ರಫ್ ಮತ್ತು ಇಫ್ತಿಕರ್ ಅಹ್ಮದ್ ತಲಾ ಒಂದು ವಿಕೆಟ್ ಪಡೆದರು.
ಬ್ಯಾಟಿಂಗ್ಗೆ ಬಂದ ಪಾಕಿಸ್ತಾನ ಉತ್ತಮ ಆರಂಭವನ್ನೇ ಪಡೆಯಿತು. ಈ ಪಂದ್ಯವನ್ನು ಪಾಕಿಸ್ತಾನ ಸುಲಭವಾಗಿ ಗೆದ್ದುಕೊಂಡಿತು. ಫಖರ್ ಜಮಾನ್ ಮತ್ತು ಇಮಾಮ್-ಉಲ್-ಹಕ್ ಪಾಕಿಸ್ತಾನಕ್ಕೆ ಇನ್ನಿಂಗ್ಸ್ ತೆರೆದರು. ಇಮಾಮ್-ಉಲ್-ಹಕ್ ಪಾಕಿಸ್ತಾನದ ಪರ ಗರಿಷ್ಠ 78 ರನ್ ಗಳಿಸಿದರು. ಅವರು ಮೊಹಮ್ಮದ್ ರಿಜ್ವಾನ್ ಅವರೊಂದಿಗೆ ಮೂರನೇ ವಿಕೆಟ್ಗೆ 85 ರನ್ ಸೇರಿಸಿದರು. ರಿಜ್ವಾನ್ ಕೂಡ ತಂಡದ ಪರ ಅರ್ಧಶತಕ ದಾಖಲಿಸಿದರು. ಇನ್ನು 63 ಎಸೆತಗಳು ಬಾಕಿ ಇರುವಂತೆಯೇ ಪಾಕಿಸ್ತಾನ ಪಂದ್ಯವನ್ನು ಗೆದ್ದುಕೊಂಡಿತು.
ಬಾಂಗ್ಲಾದೇಶ ಪರ ತಸ್ಕಿನ್ ಅಹ್ಮದ್, ಶೋರ್ಫುಲ್ ಇಸ್ಲಾಂ, ಹಸನ್ ಮಹಮೂದ್ ಮತ್ತು ಮೆಹಿದಿ ಹಸನ್ ಮಿರಾಜ್ 1-1 ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


