ಕ್ರಿಕೆಟ್

ಪಾಕ್ ವಿರುದ್ಧ ದಾಖಲೆಯ ಶತಕ ಸಿಡಿಸಿದ ಕೊಹ್ಲಿ-ರಾಹುಲ್

ಕೊಲಂಬೋದ ಪ್ರೇಮದಾಸ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಭಾರತ-ಪಾಕ್ ನಡುವಿನ 2 ನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 47 ನೇ ಶತಕ ದಾಖಲಿಸಿದ್ದಾರೆ.

ಪಾಕ್ ವಿರುದ್ಧ ದಾಖಲೆಯ ಶತಕ ಸಿಡಿಸಿದ ಕೊಹ್ಲಿ-ರಾಹುಲ್
ವಿರಾಟ್ ಕೊಹ್ಲಿ-ರಾಹುಲ್
Published On :

ಕೊಲಂಬೊ: ಕೊಲಂಬೋದ ಪ್ರೇಮದಾಸ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಭಾರತ-ಪಾಕ್ ನಡುವಿನ 2 ನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 47 ನೇ ಶತಕ ದಾಖಲಿಸಿದ್ದಾರೆ. 
 
ಇದೇ ವೇಳೆ ರಾಹುಲ್ ಏಕದಿನ ಪಂದ್ಯ ವಿಭಾಗದಲ್ಲಿ ತಮ್ಮ ವೃತ್ತಿ ಜೀವನದ 6 ನೇ ಶತಕ ದಾಖಲಿಸಿದ್ದಾರೆ. ಕೊಹ್ಲಿ-ರಾಹುಲ್ ಶತಕದ ನೆರವಿನಿಂದ ಭಾರತ 2 ವಿಕೆಟ್ ನಷ್ಟಕ್ಕೆ ಈ ವರೆಗೂ (48.1 ಓವರ್) 332 ರನ್ ಗಳನ್ನು ಗಳಿಸಿದೆ. 

ರಾಹುಲ್-ಕೊಹ್ಲಿ 183 ಎಸೆತಗಳಲ್ಲಿ ಭರ್ಜರಿ 209 ರನ್ ಗಳ ಜೊತೆಯಾಟ ನೀಡಿ ಭಾರತ ಕ್ರಿಕೆಟ್ ತಂಡ ಎದುರಾಳಿ ಪಾಕ್ ಗೆ ಅತ್ಯುತ್ತಮ ಸವಾಲು ನೀಡುವ ಸ್ಥಿತಿಯಲ್ಲಿದೆ. ಟಾಸ್ ಗೆದ್ದ ಪಾಕ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತದ ಬ್ಯಾಟ್ಸ್ಮನ್ ಗಳನ್ನು ನಿಯಂತ್ರಿಸಲು ಪಾಕ್ ಬೌಲರ್ ಗಳು ಹರಸಾಹಸಪಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.