ಐಸಿಸಿ ರ‍್ಯಾಂಕಿಂಗ್: ಏಷ್ಯಾ ಕಪ್ ನಂತರ ವಿಶ್ವದ ನಂ. 1 ಸ್ಥಾನಕ್ಕೇರಿದ ಮೊಹಮ್ಮದ್ ಸಿರಾಜ್
ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ಏಕದಿನ ಬೌಲಿಂಗ್ ರ‍್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಏಷ್ಯಾಕಪ್ ಫೈನಲ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಮೊಹಮ್ಮದ್ ಸಿರಾಜ್ ಅವರು ಮತ್ತೆ ವಿಶ್ವದ ನಂಬರ್ 1 ಸ್ಥಾನಕ್ಕೇರಿದ್ದಾರೆ.

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ಏಕದಿನ ಬೌಲಿಂಗ್ ರ‍್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಏಷ್ಯಾಕಪ್ ಫೈನಲ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಮೊಹಮ್ಮದ್ ಸಿರಾಜ್ ಅವರು ಮತ್ತೆ ವಿಶ್ವದ ನಂಬರ್ 1 ಸ್ಥಾನಕ್ಕೇರಿದ್ದಾರೆ.
ಏಷ್ಯಾಕಪ್ ಫೈನಲ್ನಲ್ಲಿ ಶ್ರೀಲಂಕಾ ವಿರುದ್ಧ 7 ಓವರ್ಗಳಲ್ಲಿ 21 ರನ್ ನೀಡಿ 6 ವಿಕೆಟ್ ಕಬಳಿಸಿದ್ದ ಮೊಹಮ್ಮದ್ ಸಿರಾಜ್ ಅವರು 694 ಅಂಕಗಳೊಂದಿಗೆ ಐಸಿಸಿ ಬೌಲರ್ಗಳ ಶ್ರೇಯಾಂಕ ಪಟ್ಟಿಯಲ್ಲಿ 8 ಸ್ಥಾನ ಮೇಲೇರಿದ್ದಾರೆ. ಅಂದರೆ ಕಳೆದ ಬಾರಿಯ ಶ್ರೇಯಾಂಕ ಪಟ್ಟಿಯಲ್ಲಿ ಮೊಹಮ್ಮದ್ ಸಿರಾಜ್ 9ನೇ ಸ್ಥಾನದಲ್ಲಿದ್ದರು. ಇದೀಗ ಏಕಾಏಕಿ ಮೇಲೇರಿ ಅಗ್ರಸ್ಥಾನಕ್ಕೆ ತಲುಪಿರುವುದು ವಿಶೇಷ.
ಈ ಹಿಂದೆ ಅಗ್ರಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್ವುಡ್ ಅವರು ಈ ಬಾರಿ ಒಟ್ಟು 678 ಅಂಕಗಳೊಂದಿಗೆ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ.
ಕಿವೀಸ್ ವೇಗಿ ಟ್ರೆಂಟ್ ಬೌಲ್ಟ್ ಈ ಬಾರಿ ಒಂದು ಸ್ಥಾನ ಕುಸಿತ ಕಂಡಿದ್ದು, ಒಟ್ಟು 677 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
ಅಫ್ಘಾನಿಸ್ತಾನದ ಸ್ಪಿನ್ನರ್ ಮುಜೀಬ್ ಉರ್ ರೆಹಮಾನ್ ಅವರು 657 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಅಫ್ಘಾನಿಸ್ತಾನದ ಸ್ಪಿನ್ ಮಾಂತ್ರಿಕ ರಶೀದ್ ಖಾನ್ ಅವರು 655 ಅಂಕಗಳೊಂದಿಗೆ 5ನೇ ಸ್ಥಾನ ಅಲಂಕರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


