ಕ್ರಿಕೆಟ್

ಆಸೀಸ್ ಸೋಲಿಸಿ ಅಪರೂಪದ ಸಾಧನೆ ಮಾಡಿದ ಭಾರತ, ಎಲ್ಲಾ ಮಾದರಿಯ ಕ್ರಿಕೆಟಿನಲ್ಲಿ ನಂಬರ್ 1 ಪಟ್ಟ!

ಮೊಹಾಲಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೊದಲ ಪಂದ್ಯದಲ್ಲಿ ಐದು ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದ ಭಾರತ ಅಂತಾರಾಷ್ಟ್ರೀಯ ಕ್ರಿಕೆಟ್ ರ‍್ಯಾಕಿಂಗ್ ಪಟ್ಟಿಯಲ್ಲಿ ಅಪರೂಪದ ಸಾಧನೆ ಮಾಡಿದೆ. ಏಕದಿನ, ಟೆಸ್ಟ್ ಹಾಗೂ ಟಿ-20 ಮಾದರಿಯಲ್ಲಿ ನಂಬರ್ 1 ಪಟ್ಟಕ್ಕೇರಿದೆ.

ಆಸೀಸ್ ಸೋಲಿಸಿ ಅಪರೂಪದ ಸಾಧನೆ ಮಾಡಿದ ಭಾರತ, ಎಲ್ಲಾ ಮಾದರಿಯ ಕ್ರಿಕೆಟಿನಲ್ಲಿ ನಂಬರ್ 1 ಪಟ್ಟ!
ಟೀಂ ಇಂಡಿಯಾ ನಾಯಕ ರಾಹುಲ್ ಮತ್ತಿತರರು
Published On :

ನವದೆಹಲಿ: ಮೊಹಾಲಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೊದಲ ಪಂದ್ಯದಲ್ಲಿ ಐದು ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದ ಭಾರತ ಅಂತಾರಾಷ್ಟ್ರೀಯ ಕ್ರಿಕೆಟ್  ರ‍್ಯಾಕಿಂಗ್ ಪಟ್ಟಿಯಲ್ಲಿ  ಅಪರೂಪದ ಸಾಧನೆ ಮಾಡಿದೆ. ಏಕದಿನ, ಟೆಸ್ಟ್ ಹಾಗೂ ಟಿ-20 ಮಾದರಿಯಲ್ಲಿ ನಂಬರ್ 1 ಪಟ್ಟಕ್ಕೇರಿದೆ.  

ಈ ಪಂದ್ಯಕ್ಕೂ ಮೊದಲು ಭಾರತ ಟೆಸ್ಟ್ ಹಾಗೂ ಟಿ20 ಸರಣಿಯಲ್ಲಿ ನಂ.1 ಸ್ಥಾನದಲ್ಲಿತ್ತು. ಆದರೆ ಏಕದಿನ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನದ ನಡುವೆ ನಂ.1 ಪಟ್ಟಕ್ಕಾಗಿ ಪೈಪೋಟಿ ನಡೆಯುತ್ತಿತ್ತು. ಆದರೆ ಈಗ ಆಸ್ಟ್ರೇಲಿಯಾ ಮಣಿಸಿರುವ ಭಾರತ, ಈ ಮೊದಲು ನಂಬರ್ 1 ಏಕದಿನ ತಂಡವೆನಿಸಿಕೊಂಡಿದ್ದ ಪಾಕಿಸ್ತಾನವನ್ನು ಹಿಮ್ಮೆಟ್ಟಿಸಿದೆ. ಈ ಮೂಲಕ ನಂಬರ್ 1 ಸ್ಥಾನಕ್ಕೇರಿದೆ. 

ಸದ್ಯ ಭಾರತ ಟಿ20 ಮಾದರಿಯಲ್ಲಿ 264 ರೇಟಿಂಗ್‌ನೊಂದಿಗೆ 1 ನೇ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್ 261 ರೇಟಿಂಗ್‌ನೊಂದಿಗೆ 2 ನೇ ಸ್ಥಾನದಲ್ಲಿದೆ. ಟೆಸ್ಟ್‌ನಲ್ಲಿ ಭಾರತ 118 ರೇಟಿಂಗ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ಕೂಡ ಅದೇ ಅಂಕಗಳನ್ನು ಹೊಂದಿದೆ ಆದರೆ ಎರಡನೇ ಸ್ಥಾನದಲ್ಲಿದೆ.

ಇನ್ನು ಏಕದಿನ ಮಾದರಿಯಲ್ಲಿ  116 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿರುವ ಭಾರತ ನಂಬರ್ 1 ಸ್ಥಾನಕ್ಕೇರಿದರೆ, ಪಾಕಿಸ್ತಾನವು 115 ರೇಟಿಂಗ್ ಪಾಯಿಂಟ್‌ಗಳೊಂದಿಗೆ 2ನೇ ಸ್ಥಾನಕ್ಕೆ ಕುಸಿದಿದೆ. ಇದು ವಿಶ್ವಕಪ್ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಆತ್ಮಸ್ಥೈರ್ಯವನ್ನು ಹೆಚ್ಚಿಸುವಲ್ಲಿ ನೆರವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.