ಐಪಿಎಲ್ 2023: ಉದ್ಘಾಟನಾ ಪಂದ್ಯದಲ್ಲಿ 5 ವಿಕೆಟ್ ಗಳಿಂದ ಸಿಎಸ್ ಕೆ ಮಣಿಸಿ ಗುಜರಾತ್ ಟೈಟನ್ಸ್ ಶುಭಾರಂಭ
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ಐಪಿಎಲ್ 2023 ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ 5 ವಿಕೆಟ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿದೆ. ಈ ಮೂಲಕ ಶುಭಾರಂಭ ಮಾಡಿದೆ.

ಅಹಮದಾಬಾದ್: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ಐಪಿಎಲ್ 2023 ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ 5 ವಿಕೆಟ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿದೆ. ಈ ಮೂಲಕ ಶುಭಾರಂಭ ಮಾಡಿದೆ.
ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಿತು. ಚೆನ್ನೈ ಸೂಪರ್ ಕಿಂಗ್ಸ್ ಪರ ಋತುರಾಜ್ ಗಾಯಕ್ವಾಡ್ 50 ಎಸೆತಗಳಲ್ಲಿ ಭರ್ಜರಿ 92 ರನ್ ಗಳಿಸಿದರೆ, ನಾಯಕ ಎಂಎಸ್ ಧೋನಿ ಅಜೇಯ 14 ರನ್ ಗಳಿಸಿದರು.
ಉಳಿದಂತೆ ಮೋಯಿನ್ ಅಲಿ 23, ಬೆನ್ ಸ್ಟೋಕ್ಸ್ 7, ಅಂಬಟಿ ರಾಯುಡು 12, ಶಿವನ್ ದುಬೆ 19 ರನ್ ಗಳಿಸಿದರು. ಗುಜರಾತ್ ಟೈಟನ್ಸ್ ಪರ ಮೊಹಮ್ಮದ್ ಶಮಿ, ರಶೀಧ್ ಖಾನ್ , ಅಲ್ಜರಿ ಜೋಸೆಪ್ ತಲಾ 2 ವಿಕೆಟ್ ಪಡೆದರೆ, ಜೊಸ್ ಲಿಟ್ಲ್ 1 ವಿಕೆಟ್ ಪಡೆದರು.
ಚೆನ್ನೈ ಸೂಪರ್ ಕಿಂಗ್ಸ್ ನೀಡಿದ 179 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಗುಜರಾತ್ ಟೈಟನ್ಸ್ 19.2 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿತು. ಆರಂಭಿಕ ಆಟಗಾರರಾದ ವೃದ್ಧಿಮನ್ ಶಹಾ 25, ಶುಭ್ ಮನ್ ಗಿಲ್ 63, ಸಾಯಿ ಸುದರ್ಶನ್ 22 ಮತ್ತು ವಿಜಯ್ ಶಂಕರ್ 27 ರನ್ ಗಳಿಸಿದರು. ಮೂಲಕ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಗೆಲುವಿನ ನಗೆ ಬೀರಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


