ಐಪಿಎಲ್ 2023: ಬಟ್ಲರ್, ಚಹಲ್ ಅಬ್ಬರ, ಹೈದರಾಬಾದ್ ವಿರುದ್ಧ 72 ರನ್ ಅಂತರದಿಂದ ರಾಜಸ್ಥಾನಕ್ಕೆ ಗೆಲುವು
ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಪಿಎಲ್ 2023 ಪಂದ್ಯದಲ್ಲಿ ಬಟ್ಲರ್ ಅಬ್ಬರದ ಬ್ಯಾಟಿಂಗ್ ಹಾಗೂ ಚಹಾಲ್ ಅವರ ನಾಲ್ಕು ವಿಕೆಟ್ ಗಳಿಂದ ಹೈದರಾಬಾದ್ ನ್ನು 72 ರನ್ ಗಳ ಅಂತರದಿಂದ ಬಗ್ಗು ಬಡಿದ ರಾಜಸ್ಥಾನ ರಾಯಲ್ಸ್ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಹೈದ್ರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಪಿಎಲ್ 2023 ಪಂದ್ಯದಲ್ಲಿ ಬಟ್ಲರ್ ಅಬ್ಬರದ ಬ್ಯಾಟಿಂಗ್ ಹಾಗೂ ಚಹಾಲ್ ಅವರ ನಾಲ್ಕು ವಿಕೆಟ್ ಗಳಿಂದ ಹೈದರಾಬಾದ್ ನ್ನು 72 ರನ್ ಗಳ ಅಂತರದಿಂದ ಬಗ್ಗು ಬಡಿದ ರಾಜಸ್ಥಾನ ರಾಯಲ್ಸ್ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 203 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿತು. ರಾಜಸ್ಥಾನ ಪರ ಯಶಸ್ವಿನಿ ಜೈಸ್ವಾಲ್ 37 ಎಸೆತಗಳಲ್ಲಿ 54 ರನ್ ಗಳಿಸಿದರೆ, ಜೋಸ್ ಬಟ್ಲರ್ 54, ಸಂಜು ಸ್ಯಾಮ್ಸನ್ 55 ರನ್ ಗಳಿಸಿದರು. ಸನ್ ರೈಸರ್ಸ್ ಹೈದ್ರಾಬಾದ್ ಪರ ಫಾರೂಖಿ, ಎನ್ ನಟರಾಜನ್ ತಲಾ 2, ಉಮ್ರಾನ್ ಮಲ್ಲಿಕ್ 1 ವಿಕೆಟ್ ಪಡೆದರು.
ರಾಜಸ್ಥಾನ ರಾಯಲ್ಸ್ ನೀಡಿದ 204 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಸನ್ ರೈಸರ್ಸ್ ಹೈದ್ರಾಬಾದ್ ತಂಡ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 131 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರಿಂದಾಗಿ ರಾಜಸ್ಥಾನ ರಾಯಲ್ಸ್ 72 ರನ್ ಗಳ ಭಾರೀ ಅಂತರದಿಂದ ಗೆಲುವಿನ ನಗೆ ಬೀರಿತು.
ಸನ್ ರೈಸರ್ಸ್ ಹೈದ್ರಾಬಾದ್ ಪರ ಮಯಾಂಕ್ ಅಗರ್ ವಾಲ್ 27, ಅಬ್ದುಲ್ ಸಮದ್ 32, ಅದಿಲ್ ರಶೀದ್ 18, ಉಮ್ರಾನ್ ಮಲ್ಲಿಕ್ 19 ರನ್ ಗಳಿಸಿದರು. ಈ ಆಟಗಾರರನ್ನು ಹೊರತುಪಡಿಸಿದರೆ ಉಳಿದ ಯಾವುದೇ ಆಟಗಾರರು ಕ್ರೀಸ್ ನಲ್ಲಿ ಹೆಚ್ಚು ಹೊತ್ತು ನಿಲ್ಲಲಿಲ್ಲ. ರಾಜಸ್ಥಾನ ರಾಯಲ್ಸ್ ಪರ ಚಹಾಲ್ 4 ವಿಕೆಟ್ ಕಬಳಿಸಿದರೆ, ಟ್ರೆಂಟ್ ಬೌಲ್ಟ್ 2, ಜಾಸನ್ ಹೊಲ್ಡರ್, ಮತ್ತು ಆರ್ ಅಶ್ವಿನ್ ತಲಾ 1 ವಿಕೆಟ್ ಪಡೆದರು. ಜೋಸ್ ಬಟ್ಲರ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


