ಕ್ರಿಕೆಟ್

IPL 2023: ಮತ್ತೆ ಹೈದರಾಬಾದ್‌ ಬ್ಯಾಟಿಂಗ್ ವಿಫಲ; ಲಖನೌ ವಿರುದ್ಧ 5 ವಿಕೆಟ್‌ ಹೀನಾಯ ಸೋಲು!

ಐಪಿಎಲ್ 2023ರ ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ಸತತ ಎರಡನೇ ಪಂದ್ಯದಲ್ಲಿ ಗೆಲುವು ಸಾಧಿಸಿದೆ.

IPL 2023: ಮತ್ತೆ ಹೈದರಾಬಾದ್‌ ಬ್ಯಾಟಿಂಗ್ ವಿಫಲ; ಲಖನೌ ವಿರುದ್ಧ 5 ವಿಕೆಟ್‌ ಹೀನಾಯ ಸೋಲು!
ಸಂಗ್ರಹ ಚಿತ್ರ
Published On :

ಲಖನೌ: ಐಪಿಎಲ್ 2023ರ ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ಸತತ ಎರಡನೇ ಪಂದ್ಯದಲ್ಲಿ ಗೆಲುವು ಸಾಧಿಸಿದೆ. 

ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಋತುವಿನ 10ನೇ ಪಂದ್ಯದಲ್ಲಿ ಲಖನೌ 5 ವಿಕೆಟ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡ ಕೇವಲ 121 ರನ್ ಗಳಿಸಲಷ್ಟೇ ಶಕ್ತವಾಯಿತು. 122 ರನ್ ಗಳ ಗುರಿ ಬೆನ್ನಟ್ಟಿದ ಲಖನೌ 16 ಓವರ್‌ಗಳಲ್ಲಿ ಮೂರು ವಿಕೆಟ್‌ ನಷ್ಟಕ್ಕೆ ಗುರಿ ತಲುಪಿತು. ಮೂರು ಪಂದ್ಯಗಳಲ್ಲಿ ಕೆಎಲ್ ರಾಹುಲ್ ನೇತೃತ್ವದ ತಂಡಕ್ಕೆ ಇದು ಸತತ ಎರಡನೇ ಗೆಲುವಾಗಿದೆ.

ಹೈದರಾಬಾದ್ ಪರ ಅನ್‌ಮೋಲ್‌ಪ್ರೀತ್‌ ಸಿಂಗ್‌ 31, ರಾಹುಲ್ ತ್ರಿಪಾಠಿ 34, ವಾಷಿಂಗ್ಟನ್ ಸುಂದರ್ 16 ಮತ್ತು ಅಬ್ದುಲ್ ಸಮದ್ ಅಜೇಯ 21 ರನ್ ಬಾರಿಸಿದ್ದಾರೆ. ಎಡಗೈ ಸ್ಪಿನ್ನರ್ ಕೃನಾಲ್ ಪಾಂಡ್ಯ ಪ್ರಮುಖ ಮೂರು ವಿಕೆಟ್‌ಗಳನ್ನು ಪಡೆದಿದ್ದು ಹೈದರಾಬಾದ್ ಅನ್ನು 121ಕ್ಕೆ ಕಟ್ಟಿಹಾಕಿದರು. ಇನ್ನು ಲಖನೌ ಸೂಪರ್‌ಜೈಂಟ್ಸ್ ಪರ ಅಮಿತ್ ಮಿಶ್ರಾ 2, ಯಶ್ ಠಾಕೂರ್, ರವಿ ಬಿಷ್ಣೋಯಿ ತಲಾ ಒಂದು ವಿಕೆಟ್ ಪಡೆದಿದ್ದಾರೆ.

ಲಖನೌ ಸೂಪರ್ ಜೈಂಟ್ಸ್ ಪರ ಕೈಲ್ ಮೇಯರ್ಸ್ 13, ಕೆಎಲ್ ರಾಹುಲ್ 35, ಕೃನಾಲ್ ಪಾಂಡ್ಯ 34 ಮತ್ತು ನಿಕೋಲಸ್ ಪೂರನ್ ಅಜೇಯ 11 ರನ್ ಪೇರಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.