ಟಿ20: ಸರಣಿಯ ಮೊದಲ ಪಂದ್ಯ ಸೋತು, ಸರಣಿ ಜಯ: ಟಿಂ ಇಂಡಿಯಾ ದಾಖಲೆ
3ನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಭರ್ಜರಿಯಾಗಿ ಸೋಲಿಸಿದ ಭಾರತ ತಂಡ ಈ ಗೆಲುವಿನ ಮೂಲಕ ಮತ್ತೊಂದು ಗಮನಾರ್ಹ ಸಾಧನೆ ಮಾಡಿದ್ದು, ಸರಣಿಯ ಮೊದಲ ಪಂದ್ಯ ಸೋತು ಅತಿ ಹೆಚ್ಚು ಸರಣಿ ಜಯಿಸಿದ ತಂಡ ಎಂಬ ಕೀರ್ತಿಗೆ ಭಾಜನವಾಗಿದೆ.

ಅಹ್ಮದಾಬಾದ್: 3ನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಭರ್ಜರಿಯಾಗಿ ಸೋಲಿಸಿದ ಭಾರತ ತಂಡ ಈ ಗೆಲುವಿನ ಮೂಲಕ ಮತ್ತೊಂದು ಗಮನಾರ್ಹ ಸಾಧನೆ ಮಾಡಿದ್ದು, ಸರಣಿಯ ಮೊದಲ ಪಂದ್ಯ ಸೋತು ಅತಿ ಹೆಚ್ಚು ಸರಣಿ ಜಯಿಸಿದ ತಂಡ ಎಂಬ ಕೀರ್ತಿಗೆ ಭಾಜನವಾಗಿದೆ.
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 168ರನ್ ಗಳ ಅಂತರದಲ್ಲಿ ಭರ್ಜರಿ ಜಯ ಗಳಿಸಿತು. ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡ ನಿಗಧಿತ 50 ಓವರ್ ಗಳಲ್ಲಿ ಶುಭ್ ಮನ್ ಗಿಲ್ ರ ಶತಕ (ಅಜೇಯ 126ರನ್)ದ ನೆರವಿನಿಂದ 4 ವಿಕೆಟ್ ನಷ್ಟಕ್ಕೆ 234 ರನ್ ಪೇರಿಸಿತ್ತು. ಈ ಬೃಹತ್ ಮೊತ್ತವನ್ನು ಬೆನ್ನು ಹತ್ತಿದ ನ್ಯೂಜಿಲೆಂಡ್ ತಂಡ ಕೇವಲ 12.1 ಓವರ್ ನಲ್ಲಿ 66 ರನ್ ಗಳಿಗೆ ಆಲೌಟ್ ಆಯಿತು. ಆ ಮೂಲಕ ನ್ಯೂಜಿಲೆಂಡ್ 168ರನ್ ಗಳ ಅಂತರದ ಹೀನಾಯ ಸೋಲು ಕಂಡಿತ್ತು.
ಟೀಂ ಇಂಡಿಯಾ ಈ ವರೆಗೂ ಕನಿಷ್ಠ 3 ಪಂದ್ಯಗಳ ಸರಣಿಯಲ್ಲಿ 10 ಟಿ20 ಸರಣಿಗಳಲ್ಲಿ ಮೊದಲ ಪಂದ್ಯ ಸೋತಿದ್ದು, ಈ ಪೈಕಿ 7 ಸರಣಿಗಳನ್ನು ಜಯಿಸಿದೆ. 2 ಸರಣಿಗಳು ಡ್ರಾದಲ್ಲಿ ಅಂತ್ಯವಾಗಿದ್ದರೆ, 2019ರಲ್ಲಿ ನಡೆದಿದ್ದ ಇದೇ ನ್ಯೂಜಿಲೆಂಡ್ ವಿರುದ್ಧದ ಸರಣಿಯನ್ನು ಕೈ ಚೆಲ್ಲಿತ್ತು. ಆ ಮೂಲಕ ಕನಿಷ್ಠ 3 ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲ ಪಂದ್ಯ ಸೋತು ಅತೀ ಹೆಚ್ಚು ಸರಣಿಗಳನ್ನು ಜಯಿಸಿದ ಶ್ರೇಯ ಭಾರತಕ್ಕೆ ದಕ್ಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


