ಕುಡಿದ ಅಮಲಿನಲ್ಲಿ ಪತ್ನಿ ಮೇಲೆ ಹಲ್ಲೆ ಆರೋಪ; ಭಾರತದ ಮಾಜಿ ಕ್ರಿಕೆಟಿಗನ ವಿರುದ್ಧ ಎಫ್ಐಆರ್ ದಾಖಲು
ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರು ಉಪನಗರ ಬಾಂದ್ರಾದಲ್ಲಿರುವ ತಮ್ಮ ಮನೆಯಲ್ಲಿ ಕುಡಿದ ಮತ್ತಿನಲ್ಲಿ ಪತ್ನಿಯ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುಂಬೈ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಮುಂಬೈ: ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರು ಉಪನಗರ ಬಾಂದ್ರಾದಲ್ಲಿರುವ ತಮ್ಮ ಮನೆಯಲ್ಲಿ ಕುಡಿದ ಮತ್ತಿನಲ್ಲಿ ಪತ್ನಿಯ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುಂಬೈ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಶುಕ್ರವಾರ ನಡೆದಿದೆ ಎನ್ನಲಾದ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಅವರು ಹೇಳಿದರು.
ಕಾಂಬ್ಳಿ ಅವರ ಪತ್ನಿ ಆ್ಯಂಡ್ರಿಯಾ ಅವರು ನೀಡಿರುವ ಪೊಲೀಸ್ ದೂರಿನಲ್ಲಿ, ಅಡುಗೆ ಪ್ಯಾನ್ನ ಹ್ಯಾಂಡಲ್ ಅನ್ನು ತನ್ನ ಮೇಲೆ ಎಸೆದಿದ್ದರಿಂದ ತಲೆಗೆ ಗಾಯವಾಗಿದೆ ಎಂದಿರುವುದಾಗಿ ಬಾಂದ್ರಾ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನ 1 ರಿಂದ 1.30 ರ ನಡುವೆ ಘಟನೆ ನಡೆದಿದ್ದು, ಕಾಂಬ್ಳಿ ಮದ್ಯದ ಅಮಲಿನಲ್ಲಿ ತನ್ನ ಫ್ಲಾಟ್ಗೆ ಆಗಮಿಸಿ ಪತ್ನಿಯನ್ನು ನಿಂದಿಸಲು ಪ್ರಾರಂಭಿಸಿದ್ದಾರೆ. ಆಗ ಅಲ್ಲಿದ್ದ ಅವರ 12 ವರ್ಷದ ಮಗ ಮಧ್ಯಪ್ರವೇಶಿಸಿದ್ದಾನೆ. ಆದರೂ, ಕಾಂಬ್ಳಿ ಅಡುಗೆಮನೆಗೆ ಹೋಗಿ ಒಡೆದ ಬಾಣಲೆಯ ಹ್ಯಾಂಡಲ್ ಅನ್ನು ತಂದು ತನ್ನ ಹೆಂಡತಿಯ ಮೇಲೆ ಎಸೆದಿದ್ದರಿಂದ ಅವರು ಗಾಯಗೊಂಡಿದ್ದಾರೆ ಎಂದು ದೂರನ್ನು ಉಲ್ಲೇಖಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಬಳಿಕ ಕಾಂಬ್ಳಿ ಪತ್ನಿ ವೈದ್ಯಕೀಯ ಪರೀಕ್ಷೆಗಾಗಿ ಬಾಬಾ ಆಸ್ಪತ್ರೆಗೆ ತೆರಳಿದ್ದಾರೆ.

ಆಕೆ ನೀಡಿರುವ ದೂರಿನ ಆಧಾರದ ಮೇಲೆ, ಬಾಂದ್ರಾ ಪೊಲೀಸರು ಶುಕ್ರವಾರ ಕಾಂಬ್ಳಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 324 (ಸ್ವಯಂಪ್ರೇರಿತವಾಗಿ ಅಪಾಯಕಾರಿ ಶಸ್ತ್ರಾಸ್ತ್ರಗಳಿಂದ ಗಾಯಗೊಳಿಸುವುದು) ಮತ್ತು 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


