ಬಾರ್ಡರ್-ಗವಾಸ್ಕರ್ ಟೆಸ್ಟ್ ಟ್ರೋಫಿ: ಜಡೇಜಾ ಮಾರಕ ಬೌಲಿಂಗ್, 177 ರನ್ ಗಳಿಗೆ ಆಸ್ಟ್ರೇಲಿಯಾ ಆಲೌಟ್!
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ಸ್ಪಿನ್ನರ್ ರವೀಂದ್ರ ಜಡೇಜಾ ಮಾರಕ ಬೌಲಿಂಗ್ ಗೆ ಆಸ್ಟ್ರೇಲಿಯಾ ತತ್ತರಿಸಿದ್ದು 177 ರನ್ ಗಳಿಗೆ ಆಲೌಟ್ ಆಗಿದೆ.

ನಾಗ್ಪುರ: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ಸ್ಪಿನ್ನರ್ ರವೀಂದ್ರ ಜಡೇಜಾ ಮಾರಕ ಬೌಲಿಂಗ್ ಗೆ ಆಸ್ಟ್ರೇಲಿಯಾ ತತ್ತರಿಸಿದ್ದು 177 ರನ್ ಗಳಿಗೆ ಆಲೌಟ್ ಆಗಿದೆ.
ನಾಗ್ಪುರದಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ನಲ್ಲಿ 177 ರನ್ ಗಳಿಗೆ ಆಲೌಟ್ ಆಗಿದೆ. ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ 1, ಉಸ್ಮಾನ್ ಖವಾಜಾ 1, ಮಾರ್ನಸ್ ಲ್ಯಾಬುಸ್ಚಾಗ್ನೆ 49, ಸ್ಟೀವ್ ಸ್ಮೀತ್ 37, ಪೀಟರ್ ಹ್ಯಾಂಡ್ಸ್ಕಾಂಬ್ 31, ಅಲೆಕ್ಸ್ ಕ್ಯಾರಿ 36 ರನ್ ಬಾರಿಸಿದ್ದಾರೆ.
ಭಾರತದ ಪರ ರವೀಂದ್ರ ಜಡೇಜಾ 5, ಆರ್ ಅಶ್ವಿನ್ 3, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ತಲಾ 1 ವಿಕೆಟ್ ಪಡೆದಿದ್ದಾರೆ.
ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಎರಡನೇ ಪಂದ್ಯ ಫೆಬ್ರವರಿ 17ರಿಂದ ದೆಹಲಿಯಲ್ಲಿ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


