ಮೊದಲು ಬ್ಯಾಟಿಂಗ್ ವೇಳೆ ಸತತ 4ನೇ ಬಾರಿಗೆ 300ಕ್ಕೂ ಅಧಿಕ ರನ್ ಕಲೆಹಾಕಿದ ಭಾರತ
ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತ ತಂಡ ಪ್ರವಾಸಿ ತಂಡಕ್ಕೆ 350 ರನ್ ಗಳ ಬೃಹತ್ ಗುರಿ ನೀಡಿದ್ದು, ಆ ಮೂಲಕ ಗಮನಾರ್ಹ ದಾಖಲೆಯೊಂದನ್ನು ಮಾಡಿದೆ.

ಹೈದರಾಬಾದ್: ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತ ತಂಡ ಪ್ರವಾಸಿ ತಂಡಕ್ಕೆ 350 ರನ್ ಗಳ ಬೃಹತ್ ಗುರಿ ನೀಡಿದ್ದು, ಆ ಮೂಲಕ ಗಮನಾರ್ಹ ದಾಖಲೆಯೊಂದನ್ನು ಮಾಡಿದೆ.
ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿಗ ಭಾರತ ತಂಡ ಶುಭ್ ಮನ್ ಗಿಲ್ (208 ರನ್) ದ್ವಿಶತಕದ ನೆರವಿನಿಂದ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 349 ರನ್ ಗಳಿಸಿ ನ್ಯೂಜಿಲೆಂಡ್ ಗೆ ಗೆಲ್ಲಲು 350 ರನ್ ಗಳ ಬೃಹತ್ ಗುರಿ ನೀಡಿದೆ.
ಭಾರತದ ಪರ ನಾಯಕ ರೋಹಿತ್ ಶರ್ಮಾ 34 ರನ್ ಗಳಿಸಿದರೆ, ರನ್ ಮೆಶಿನ್ ವಿರಾಟ್ ಕೊಹ್ಲಿ ಕೇವಲ 8 ರನ್ ಗಳಿಗೆ ಔಟಾಗಿ ನಿರಾಸೆ ಮೂಡಿಸಿದರು. ಆರಂಭಿಕ ಆಟಗಾರ ಶುಭ್ ಮನ್ ಗಿಲ್ ಕೇವಲ 149 ಎಸೆತಗಳನ್ನು ಎದುರಿಸಿ 9 ಸಿಕ್ಸರ್ ಮತ್ತು 19 ಬೌಂಡರಿಗಳ ನೆರವಿನಿಂದ 208ರನ್ ಗಳನ್ನು ಕಲೆಹಾಕಿದರು. ಹಾರ್ದಿಕ್ ಪಾಂಡ್ಯಾ 28 ಮತ್ತು ಸೂರ್ಯ ಕುಮಾರ್ ಯಾದವ್ 31 ರನ್ ಗಳಿಸಿ ಗಿಲ್ ಗೆ ಉತ್ತಮ ಸಾಥ್ ನೀಡಿದರು.
ಈ ಪಂದ್ಯದ ಬೃಹತ್ ರನ್ ಗಳ ಸಾಧನೆ ಮೂಲಕ ಟೀಂ ಇಂಡಿಯಾ ಮತ್ತೊಂದು ಗಮನಾರ್ಹ ಸಾಧನೆ ಮಾಡಿದ್ದು, ಮೊದಲು ಬ್ಯಾಟಿಂಗ್ ಮಾಡಿದ ಸತತ 4ನೇ ಪಂದ್ಯದಲ್ಲಿ 300ಕ್ಕೂ ಅಧಿಕ ರನ್ ಗಳಿಸಿದ ಸಾಧನೆ ಮಾಡಿದೆ. ಈ ಹಿಂದೆ ಬಾಂಗ್ಲಾದೇಶ ವಿರುದ್ಧ ಚೆಟ್ಟೋಗ್ರಾಮ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡ 8 ವಿಕೆಟ್ ನಷ್ಟಕ್ಕೆ ದಾಖಲೆಯ 409 ರನ್ ಗಳಿಸಿತ್ತು. ಆ ಬಳಿಕ ಶ್ರೀಲಂಕಾ ವಿರುದ್ಧ ಗುವಾಹತಿಯಲ್ಲಿ ನಡೆದ ಪಂದ್ಯದಲ್ಲಿ 7 ವಿಕೆಟ್ ನಷ್ಟಕ್ಕೆ 373ರನ್ ಗಳಿಸಿತ್ತು. ನಂತರ ತ್ರಿವೆಂಡ್ರಮ್ ನಲ್ಲಿ ವಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್ ನಷ್ಟಕ್ಕೆ 390 ರನ್ ಕಲೆಹಾಕಿತ್ತು.
ಇದೀಗ ನ್ಯೂಜಿಲೆಂಡ್ ವಿರುದ್ಧ 8 ವಿಕೆಟ್ ನಷ್ಟಕ್ಕೆ 349 ರನ್ ಗಳಿಸಿ ಸತತ ನಾಲ್ಕನೇ ಬಾರಿಗೆ 300ಕ್ಕೂ ಅಧಿಕ ರನ್ ಗಳಿಸಿದ ಕೀರ್ತಿಗೆ ಭಾಜನವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


