ಕ್ರಿಕೆಟ್

ಧರ್ಮಸ್ಥಳದ ಮಂಜುನಾಥನ ದರ್ಶನ ಪಡೆದ ಕೆ.ಎಲ್.ರಾಹುಲ್: ವಿಶೇಷ ಉಡುಗೊರೆ ನೀಡಿದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ

ಧರ್ಮಸ್ಥಳದ ಮಂಜುನಾಥನ ದರ್ಶನ ಪಡೆದ ಕೆ.ಎಲ್.ರಾಹುಲ್: ವಿಶೇಷ ಉಡುಗೊರೆ ನೀಡಿದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ
ಧರ್ಮಸ್ಥಳಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಬ್ಯಾಟರ್ ಕೆಎಲ್ ರಾಹುಲ್
Published On :

ದಕ್ಷಿಣ ಕನ್ನಡ: ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ

ವೀರೇಂದ್ರ ಹೆಗ್ಗಡೆ ಅವರು ಕೆಎಲ್ ರಾಹುಲ್​ಗೆ ಶಾಲು ಹೊದಿಸಿ, ಗೋವಿನ ಕಂಚಿನ ಪ್ರತಿಮೆ ಹಾಗೂ ಬೆಳ್ಳಿ ನಾಣ್ಯ ನೀಡಿ ಗೌರವಿಸಿದರು. ಇದೇ ವೇಳೆ ರಾಹುಲ್, ವೀರೇಂದ್ರ ಹೆಗ್ಗಡೆ ಕುಟುಂಬಸ್ಥರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಐಪಿಎಲ್ 2023ರ ಸಂದರ್ಭದಲ್ಲಿ ಫೀಲ್ಡಿಂಗ್ ವೇಳೆ ಕೆಎಲ್ ರಾಹುಲ್ ಮೊಣಕಾಲಿಗೆ ಗಾಯವಾಗಿತ್ತು. ಇದರಿಂದಾಗಿ ಅರ್ಧದಲ್ಲೇ ಟೂರ್ನಿಯಿಂದ ಹೊರನಡೆದಿದ್ದರು. ಅಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯಕ್ಕೂ ಅಲಭ್ಯರಾಗಿದ್ದರು. ನಂತರ ಅವರು ಲಂಡನ್‌ಗೆ ಹೋಗಿ ಶಸ್ತ್ರಚಿಕಿತ್ಸೆಗೆ ಮಾಡಿಸಿಕೊಂಡಿದ್ದರು. ಸದ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. 

ಮಾರ್ಚ್‌ನಲ್ಲಿ, ರಾಹುಲ್ ಮತ್ತು ಅವರ ಪತ್ನಿ ಅಥಿಯಾ ಶೆಟ್ಟಿ ಉಜ್ಜೈನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.