ಕ್ರಿಕೆಟ್

ಮಹಿಳಾ ಐಪಿಎಲ್: ಮೊದಲ ಪಂದ್ಯದಲ್ಲೇ ಮುಗ್ಗರಿಸಿದ ಆರ್ ಸಿಬಿ ವನಿತೆಯರು, ಡೆಲ್ಲಿ ಕ್ಯಾಪಿಟಲ್ಸ್ ಗೆ 60 ರನ್ ಗಳ ಭರ್ಜರಿ ಜಯ

ಮಹಿಳಾ ಐಪಿಎಲ್ ಟೂರ್ನಿಯ ಚೊಚ್ಚಲ ಪಂದ್ಯದಲ್ಲಿಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಮುಗ್ಗರಿಸಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡದ ವಿರುದ್ಧ 60 ರನ್ ಗಳ ಹೀನಾಯ ಸೋಲುಕಂಡಿದೆ.

ಮಹಿಳಾ ಐಪಿಎಲ್: ಮೊದಲ ಪಂದ್ಯದಲ್ಲೇ ಮುಗ್ಗರಿಸಿದ ಆರ್ ಸಿಬಿ ವನಿತೆಯರು, ಡೆಲ್ಲಿ ಕ್ಯಾಪಿಟಲ್ಸ್ ಗೆ 60 ರನ್ ಗಳ ಭರ್ಜರಿ ಜಯ
ಆರ್ ಸಿಬಿಗೆ ಸೋಲು
Published On :

ಮುಂಬೈ: ಮಹಿಳಾ ಐಪಿಎಲ್ ಟೂರ್ನಿಯ ಚೊಚ್ಚಲ ಪಂದ್ಯದಲ್ಲಿಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಮುಗ್ಗರಿಸಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡದ ವಿರುದ್ಧ 60 ರನ್ ಗಳ ಹೀನಾಯ ಸೋಲುಕಂಡಿದೆ.

ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ನೀಡಿದ 224 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ನಿಗಧಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 163ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ 60ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು.

ಆರ್ ಸಿಬಿ ಪರ ನಾಯಕಿ ಸ್ಮೃತಿ ಮಂದಾನ (35 ರನ್), ಎಲಿಸ್ ಪೆರ್ರಿ (31 ರನ್), ಹೀದರ್ ನೈಟ್ (34) ಮತ್ತು ಮೇಗಾನ್ ಸ್ಕಟ್ (ಅಜೇಯ 30) ಹೋರಾಟ ನೀಡಿದರೂ ಸಫಲವಾಗಲಿಲ್ಲ. ಮಧ್ಯಮ ಕ್ರಮಾಂಕದಲ್ಲಿ ಹೇಳಿಕೊಳ್ಳುವಂತಹ ಬ್ಯಾಟಿಂಗ್ ಪ್ರದರ್ಶನ ಮೂಡಿಬರಲಿಲ್ಲ. ಪ್ರಮುಖವಾಗಿ ಬೃಹತ್ ಗುರಿಯ ಪಂದ್ಯದಲ್ಲಿ ಒಂದು ಭರ್ಜರಿ ಇನ್ನಿಂಗ್ಸ್ ನ ಕೊರತೆ ಎದ್ದು ಕಾಣುತ್ತಿತ್ತು. ಬೌಲಿಂಗ್ ವೈಫಲ್ಯ ಕೂಡ ಆರ್ ಸಿಬಿ ಸೋಲಿಗೆ ಕಾರಣವಾಯಿತು.

ಇನ್ನು ಡೆಲ್ಲಿ ಪರ ಟಾರಾ ನೋರಿಸ್ 5 ವಿಕೆಟ್ ಪಡೆದು ಮಂಚಿದರೆ, ಆಲಿಸ್ ಕ್ಯಾಪ್ಸಿ 2 ಮತ್ತು ಶಿಖಾ ಪಾಂಡೆ 1 ವಿಕೆಟ್ ಪಡೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.