ಐಪಿಎಲ್ 2023: ಪ್ರಭ್ ಸಿಮ್ರನ್ ಶತಕ: ಡೆಲ್ಲಿ ವಿರುದ್ಧ ಗೆದ್ದ ಪಂಜಾಬ್ ಪ್ಲೇ ಆಫ್ ಕನಸು ಜೀವಂತ!
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ನ 59 ನೇ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ನವದೆಹಲಿ: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ನ 59 ನೇ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
ಈ ಪಂದ್ಯದಲ್ಲಿ ಸೋಲುವ ಮೂಲಕ ಡೆಲ್ಲಿ ಟೂರ್ನಿಯಿಂದ ಹೊರಬಿದ್ದಿದೆ. 20 ಓವರ್ಗಳಲ್ಲಿ ಪಂಜಾಬ್ ಕಿಂಗ್ಸ್ ತಂಡ ಪ್ರಭ್ಸಿಮ್ರಾನ್ರ ಶತಕದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತ್ತು. 168 ರನ್ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಲಷ್ಟೇ ಸಾಧ್ಯವಾಗಿ ಸೋಲೊಪ್ಪಿಕೊಂಡಿತು.
ಡೆಲ್ಲಿ ತಂಡದ ಪರ ವಾರ್ನರ್ (54) ಹಾಗೂ ಫಿಲ್ ಸಾಲ್ಟ್ (21) ಜೊತೆಯಾಟದಲ್ಲಿ 6.2 ಓವರ್ ಗಳಿಗೆ 69 ರನ್ ಗಳಿಸಿ ತಂಡಕ್ಕೆ ನೆರವಾದರು. ಆದರೆ ನಂತರ ಬಂದ ಬ್ಯಾಟ್ಸ್ಮನ್ ಗಳ ವೈಫಲ್ಯದಿಂದ ತಂಡ 20 ಓವರ್ ಗಳಲ್ಲಿ 136 ರನ್ ಗಳಿಸಿತು. ಪರಿಣಾಮ ಪಂಜಾಬ್ 31 ರನ್ ಗಳ ಗೆಲುವು ದಾಖಲಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


