IPLನಲ್ಲಿ ಅತಿ ಹೆಚ್ಚು ಶತಕ ಸಿಡಿಸಿ ವಿಶ್ವದಾಖಲೆ ಬರೆದ ವಿರಾಟ್! ಗೇಯ್ಲ್ ದಾಖಲೆ ಪುಡಿಪುಡಿ!
ಐಪಿಎಲ್ 2023 ರ ಟೂರ್ನಿಯ 70 ನೇ ಪಂದ್ಯದಲ್ಲಿ ಶತಕ ದಾಖಲಿಸುವ ಮೂಲಕ ವಿರಾಟ್ ಕೊಹ್ಲಿ ವಿಶ್ವದಾಖಲೆ ನಿರ್ಮಿಸಿದ್ದಾರೆ.

ಬೆಂಗಳೂರು: ಐಪಿಎಲ್ 2023 ರ ಟೂರ್ನಿಯ 70 ನೇ ಪಂದ್ಯದಲ್ಲಿ ಶತಕ ದಾಖಲಿಸುವ ಮೂಲಕ ವಿರಾಟ್ ಕೊಹ್ಲಿ ವಿಶ್ವದಾಖಲೆ ನಿರ್ಮಿಸಿದ್ದಾರೆ.
ಗುಜರಾತ್ ಟೈಟನ್ಸ್ ತಂಡದ ವಿರುದ್ಧ ಮೇ.21 ರಂದು ಅಜೇಯ 101 ರನ್ ಗಳಿಸುವ ಮೂಲಕ ವಿರಾಟ್ ಕೊಹ್ಲಿ ಐಪಿಎಲ್ ಫಾರ್ಮ್ಯಾಟ್ ನಲ್ಲಿ 7 ನೇ ಶತಕ ದಾಖಲಿಸಿದ್ದಾರೆ.
ಈ ಹಿಂದೆ ಹೈದರಾಬಾದ್ ತಂಡದ ವಿರುದ್ಧ 65 ನೇ ಪಂದ್ಯದಲ್ಲಿ 6 ನೇ ಶತಕ ಭಾರಿಸುವ ಮೂಲಕ ಕೊಹ್ಲಿ ಕ್ರಿಸ್ ಗೇಯ್ಲ್ ದಾಖಲೆಯನ್ನು ಸರಿಗಟ್ಟಿದ್ದರು. ಈಗ 7 ನೇ ಶತಕ ದಾಖಲಿಸಿ ಗೇಯ್ಲ್ ಹೆಸರಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


