ವಿಶ್ವಕಪ್ ಕ್ರಿಕೆಟ್: ಭಾರತೀಯ ಸ್ಪಿನ್ನರ್ ಗಳಿಗೆ ನೆರವಾಗುವಂತೆ ಪಿಚ್ ಬದಲಾಯಿಸಲಾಗುತ್ತಿದೆಯೇ? ಗವಾಸ್ಕರ್ ಹೇಳಿದ್ದು ಹೀಗೆ...
ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತೀಯ ಸ್ಪಿನ್ನರ್ ಗಳಿಗೆ ಅನುಕೂಲವಾಗುವಂತೆ ಮೈದಾನದ ಪಿಚ್ ಬದಲಾಯಿಸಲಾಗುತ್ತಿದೆ ಎಂಬಂತಹ ವರದಿಗಳ ವಿರುದ್ಧ ಭಾರತದ ಕ್ರಿಕೆಟ್ ಲೆಜೆಂಡರಿ ಸುನೀಲ್ ಗವಾಸ್ಕರ್ ಕಿಡಿಕಾರಿದ್ದಾರೆ.

ಮುಂಬೈ: ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತೀಯ ಸ್ಪಿನ್ನರ್ ಗಳಿಗೆ ಅನುಕೂಲವಾಗುವಂತೆ ಮೈದಾನದ ಪಿಚ್ ಬದಲಾಯಿಸಲಾಗುತ್ತಿದೆ ಎಂಬಂತಹ ವರದಿಗಳ ವಿರುದ್ಧ ಭಾರತದ ಕ್ರಿಕೆಟ್ ಲೆಜೆಂಡರಿ ಸುನೀಲ್ ಗವಾಸ್ಕರ್ ಕಿಡಿಕಾರಿದ್ದಾರೆ.
ವಾಖಂಡೆ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ನ್ಯೂಜಿಲೆಂಡ್ ವಿರುದ್ಧದ ಸೆಮಿ ಫೈನಲ್ ಪಂದ್ಯದಲ್ಲಿ ಕೊನೆ ಗಳಿಗೆಯಲ್ಲಿ ಭಾರತ ತಂಡಕ್ಕೆ ಅನುಕೂಲವಾಗುವಂತೆ ಬಿಸಿಸಿಐ ಪಿಚ್ ಬದಲಾಯಿಸಲಾಗಿತ್ತು ಎಂಬಂತಹ ಆರೋಪ ಕೇಳಿಬಂದಿತ್ತು.ಈ ಕುರಿತು ಪಂದ್ಯದ ಬಳಿಕ ಮಾತನಾಡಿದ ಸುನೀಲ್ ಗವಾಸ್ಕರ್, ಶಾಟ್ ಅಪ್, ಅಸಂಬದ್ದ ಹೇಳಿಕೆ ನೀಡುವುದನ್ನು ನಿಲ್ಲಿಸಿ ಎಂದು ಟೀಕಾಕಾರರಿಗೆ ತಿರುಗೇಟು ನೀಡಿದರು.
"ಅಂತಾರಾಷ್ಟ್ರೀಯ ಪಂದ್ಯಾವಳಿಯಲ್ಲಿ ಭಾರತ ಫೈನಲ್ ತಲುಪಿದಾಗ, ಅದು ಯಾವಾಗಲೂ ಹೆಮ್ಮೆಯ ವಿಷಯವಾಗಿದೆ. ಅಲ್ಲದೇ ಅದು ವಿಶ್ವಕಪ್ ಆಗಿದ್ದರೆ ಹೆಚ್ಚು ವಿಶೇಷವಾಗಿದೆ. ಭಾರತ ಅದನ್ನು ತನ್ನದೇ ಶೈಲಿಯಲ್ಲಿ ಅಚ್ಚುಕಟ್ಟಾಗಿ ಮಾಡಿದೆ. ಭಾರತ ತಂಡ 400 ರನ್ ಗಡಿಗೆ ತಲುಪಿದೆ. ಇದೊಂದು ಅದ್ಬುತ ಪಿಚ್ ಆಗಿದೆ. ಇದರಲ್ಲಿ 700ಕ್ಕೂ ಹೆಚ್ಚು ರನ್ ಗಳಿಸಿದ್ದೇವೆ. ಭಾರತದ ಸ್ಪಿನ್ನರ್‌ಗಳಿಗೆ ಅನುಕೂಲವಾಗುವಂತೆ ಪಿಚ್ ಸಿದ್ಧಪಡಿಸಲಾಗಿದೆ ಎಂಬುದು ಮುರ್ಖತನದ ಹೇಳಿಕೆ ಎಂದು ಕಿಡಿಕಾರಿದರು.
ಟಾಸ್ ನಂತರ ಅಥವಾ ಇನ್ನಿಂಗ್ಸ್ ಮಧ್ಯದಲ್ಲಿ ಪಿಚ್ ಬದಲಾಯಿಸಲಾಗಿಲ್ಲ. ಈ ಪಿಚ್ ನಲ್ಲಿ ಉಭಯ ತಂಡಗಳು ಉತ್ತಮ ರನ್ ಗಳಿಸಿವೆ. ಹೀಗಾಗಿ ಇಂತಹ ಅಸಂಬದ್ಧ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಸುನೀಲ್ ಗವಾಸ್ಕರ್ ತಾಕೀತು ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


