ಐಸಿಸಿ ವಿಶ್ವಕಪ್: ಬಾಂಗ್ಲಾದೇಶ ವಿರುದ್ಧ ನ್ಯೂಜಿಲೆಂಡ್ಗೆ 8 ವಿಕೆಟ್ಗಳ ಭರ್ಜರಿ ಜಯ
ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ತಂಡ ತನ್ನ ಅಜೇಯ ಓಟ ಮುಂದುವರಿಸಿದ್ದು, ಟೂರ್ನಿಯಲ್ಲಿ ಸತತ 3ನೇ ಜಯ ದಾಖಲಿಸಿದೆ.

ಚೆನ್ನೈ: ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ತಂಡ ತನ್ನ ಅಜೇಯ ಓಟ ಮುಂದುವರಿಸಿದ್ದು, ಟೂರ್ನಿಯಲ್ಲಿ ಸತತ 3ನೇ ಜಯ ದಾಖಲಿಸಿದೆ.
ಇಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಇಂದಿನ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಕಿವೀಸ್ ಪಡೆ 8 ವಿಕೆಟ್ಗಳ ಜಯ ದಾಖಲಿಸಿದ್ದು, ಈ ಮೂಲಕ ಟೂರ್ನಿಯಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ನ್ಯೂಜಿಲೆಂಡ್ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ, ಮುಷ್ಫಿಕರ್ ರಹೀಂ ಗಳಿಸಿದ ಅರ್ಧಶತಕದ ಬಲದಿಂದ ನಿಗದಿತ 50 ಓವರ್ಗಳಲ್ಲಿ 9 ವಿಕೆಟ್ಗಳನ್ನು ಕಳೆದುಕೊಂಡು 245 ರನ್ ಕಲೆಹಾಕಿತು. ಸುಲಭ ಗುರಿಯನ್ನು ಬೆನ್ನತ್ತಿದ ನ್ಯೂಜಿಲೆಂಡ್ 42.5 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 248 ರನ್ ಗಳಿಸುವ ಮೂಲಕ ಜಯದ ನಗೆ ಬೀರಿತು.
ನ್ಯೂಜಿಲೆಂಡ್ ಪರ ನಾಯಕ ಕೇನ್ ವಿಲಿಯಮ್ಸನ್ ಅಜೇಯ 78 ಹಾಗೂ ಮಿಚೆಲ್ 89 ರನ್ಗಳಿಸಿದರು.
ಬಾಂಗ್ಲಾ ವಿರುದ್ಧ ನ್ಯೂಜಿಲೆಂಡ್ ದಾಖಲೆ
ಇನ್ನು ಈ ಜಯದ ಮೂಲಕ ನ್ಯೂಜಿಲೆಂಡ್ ತಂಡ ವಿಶ್ವಕಪ್ ನಲ್ಲಿ ಬಾಂಗ್ಲಾದೇಶದ ವಿರುದ್ಧ ತನ್ನ ಅಜೇಯ ಓಟ ಮುಂದುವರೆಸಿದೆ. ಬಾಂಗ್ಲಾದೇಶದ ವಿರುದ್ಧ ನ್ಯೂಜಿಲೆಂಡ್ ಗೆ ವಿಶ್ವಕಪ್ ಟೂರ್ನಿಯಲ್ಲಿ ಇದು ಸತತ 6ನೇ ಗೆಲುವಾಗಿದೆ. ಈ ಪಟ್ಟಿಯಲ್ಲಿ ಪಾಕಿಸ್ತಾನ ಅಗ್ರಸ್ಥಾನಿಯಾಗಿದ್ದು, ಪಾಕಿಸ್ತಾನ ತಂಡ ಶ್ರೀಲಂಕಾ ವಿರುದ್ಧ ಸತತ 8 ವಿಶ್ವಕಪ್ ಪಂದ್ಯಗಳಲ್ಲಿ ಜಯಗಳಿಸಿದೆ. ಅಂತೆಯೇ ಇದೇ ಪಾಕಿಸ್ತಾನ ವಿರುದ್ಧ ಭಾರತ ತಂಡ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸತತ 7 ಗೆಲುವು ಸಾಧಿಸಿದೆ. ಅಂತೆಯೇ ಜಿಂಬಾಬ್ವೆ ವಿರುದ್ಧ ವೆಸ್ಟ್ ಇಂಡೀಸ್ ತಂಡ ಸತತ 6 ಗೆಲುವು ಸಾಧಿಸಿದೆ.
Most wins against a team without any loss in WC
8 - Pakistan vs Sri Lanka
7 - India vs Pakistan
6 - West Indies vs Zimbabwe
6 - New Zealand vs Bangladesh*
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


