IPL 2024 ಹೊತ್ತಲ್ಲೇ ಟೀಂ ಇಂಡಿಯಾ ಕ್ರಿಕೆಟಿಗ Prithvi Shawಗೆ ಸಂಕಷ್ಟ: ಲೈಂಗಿಕ ಕಿರುಕುಳ ಪ್ರಕರಣದ ತನಿಖೆಗೆ ಕೋರ್ಟ್ ಆದೇಶ!
ಇಂಡಿಯನ್ ಪ್ರೀಮಿಯರ್ ಲೀಗ್ 2024 ಕ್ರಿಕೆಟ್ ಟೂರ್ನಿ ಚಾಲ್ತಿಯಲ್ಲಿರುವಂತೆಯೇ ಟೀಂ ಇಂಡಿಯಾದ ಸ್ಟಾರ್ ಆಟಗಾರ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪೃಥ್ವಿ ಶಾಗೆ ಸಂಕಷ್ಟ ಎದುರಾಗಿದ್ದು, ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ತನಿಖೆಗೆ ಆದೇಶಿಸಿದೆ.

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2024 ಕ್ರಿಕೆಟ್ ಟೂರ್ನಿ ಚಾಲ್ತಿಯಲ್ಲಿರುವಂತೆಯೇ ಟೀಂ ಇಂಡಿಯಾದ ಸ್ಟಾರ್ ಆಟಗಾರ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪೃಥ್ವಿ ಶಾಗೆ ಸಂಕಷ್ಟ ಎದುರಾಗಿದ್ದು, ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ತನಿಖೆಗೆ ಆದೇಶಿಸಿದೆ.
ಪೃಥ್ವಿ ಶಾ (Prithvi Shaw) ಮತ್ತು ಸಪ್ನಾ ಗಿಲ್ (Sapna GIll) ನಡುವಿನ ಹಲ್ಲೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ಸ್ಥಳೀಯ ಮುಂಬೈ ನ್ಯಾಯಾಲಯವು ಪೃಥ್ವಿ ಶಾ ವಿರುದ್ಧ ಸಪ್ನಾಗಿಲ್ ರ ಲೈಂಗಿಕ ಕಿರುಕುಳ ಆರೋಪದ ಕುರಿತು ತನಿಖೆ ನಡೆಸುವಂತೆ ಪೊಲೀಸರಿಗೆ ಆದೇಶ ನೀಡಿದೆ. ಸಪ್ನಾಗಿಲ್ ರ ಲೈಂಗಿಕ ಕಿರುಕುಳ ಆರೋಪದ ಕುರಿತು ತನಿಖೆ ನಡೆಸಿ ಜೂನ್ 19 ರೊಳಗೆ ವರದಿ ಸಲ್ಲಿಸುವಂತೆ ಮುಂಬೈ ಪೊಲೀಸರಿಗೆ ನಿರ್ದೇಶನ ನೀಡಿದೆ.
ಏನಿದು ಪ್ರಕರಣ?
ಕಳೆದ ವರ್ಷ ಫೆಬ್ರವರಿಯಲ್ಲಿ ಮುಂಬೈ ನಗರದ ಅಂಧೇರಿ ಪ್ರದೇಶದ ಪಬ್ನಲ್ಲಿ ಸಪ್ನಾ ಗಿಲ್ ಮತ್ತು ಪೃಥ್ವಿ ಶಾ ನಡುವೆ ಜಗಳ ಏರ್ಪಟ್ಟಿತ್ತು. ಇದೇ ಜಗಳಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ಬೇಸ್ ಬಾಲ್ ಬ್ಯಾಟ್ ನಿಂದ ಪೃಥ್ವಿ ಶಾ ಅವರ ಕಾರಿನ ಮೇಲೆ ದಾಳಿ ಮಾಡಿದ ಆರೋಪದ ಮೇಲೆ ಸಪ್ನಾ ಗಿಲ್ ಅವರನ್ನು ಬಂಧಿಸಲಾಗಿತ್ತು. ನಂತರ, ಆಕೆ ಪೃಥ್ವಿ ಶಾ ವಿರುದ್ಧ ಆಕೆ ಲೈಂಗಿಕ ಕಿರುಕುಳದ ಆರೋಪಗಳನ್ನು ಮಾಡಿದ್ದರು. ಇದೀಗ ಇದೇ ಪ್ರಕರಣದ ತನಿಖೆ ನಡೆಸುವಂತೆ ಕೋರ್ಟ್ ದೆಹಲಿ ಪೊಲೀಸರಿಗೆ ಆದೇಶ ನೀಡಿದೆ.
ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದ ಸಪ್ನಾ ಗಿಲ್
ಪೃಥ್ವಿ ಶಾ ಮತ್ತು ಅವರ ಸ್ನೇಹಿತ ಆಶಿಶ್ ಯಾದವ್ ವಿರುದ್ಧ ಸಪ್ನಾ ಗಿಲ್ ಲೈಂಗಿಕ ಕಿರುಕುಳದ ಆರೋಪ ಹೊರಿಸಿ ದೂರು ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಮಹಿಳೆಯ ಗೌರವಕ್ಕೆ ಧಕ್ಕೆ ತರುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ), 509 (ಮಹಿಳೆಯ ಗೌರವವನ್ನು ಅವಮಾನಿಸುವ ಉದ್ದೇಶದ ಪದ, ಸನ್ನೆ ಅಥವಾ ಕೃತ್ಯ) ಮತ್ತು 324 (ಅಪಾಯಕಾರಿ ಆಯುಧಗಳು ಅಥವಾ ವಿಧಾನಗಳಿಂದ ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು) ಅಡಿಯಲ್ಲಿ ಅವರು ಎಫ್ಐಆರ್ ದಾಖಲಿಸಿದ್ದಾರೆ. ಇದೀಗ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಸ್.ಸಿ.ಟೇಡೆ ಅವರು ಈ ಬಗ್ಗೆ ತನಿಖೆ ನಡೆಸಿ ಜೂನ್ 19 ರೊಳಗೆ ವರದಿ ಸಲ್ಲಿಸುವಂತೆ ಮುಂಬೈ ಪೊಲೀಸರಿಗೆ ಸೂಚಿಸಿದ್ದಾರೆ.
ಕುತೂಹಲಕಾರಿ ಸಂಗತಿಯೆಂದರೆ, ಮುಂಬೈ ಪೊಲೀಸರು ಹಿಂದಿನ ತನಿಖೆಯಲ್ಲಿ ಶಾ ಅವರನ್ನು ಆರೋಪದಿಂದ ಮುಕ್ತಗೊಳಿಸಿದ್ದರು.
ಐಪಿಎಲ್ ನಲ್ಲಿ ತಲ್ಲೀನರಾಗಿರುವ ಪೃಥ್ವಿ ಶಾ
ಇನ್ನು ಪೃಥ್ವಿ ಶಾ ಪ್ರಸ್ತುತ ಐಪಿಎಲ್ 2024 ರಲ್ಲಿ ನಿರತರಾಗಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸದಸ್ಯರಾಗಿದ್ದಾರೆ. ಬಲಗೈ ಬ್ಯಾಟ್ಸ್ಮನ್ ಐಪಿಎಲ್ 2024 ರಲ್ಲಿ ಡಿಸಿ ಪರ 3 ಪಂದ್ಯಗಳಲ್ಲಿ 2 ಪಂದ್ಯಗಳನ್ನು ಆಡಿದ್ದಾರೆ. ಅವರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 42 ರನ್ ಗಳಿಸಿದ್ದರು ಮತ್ತು ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಹಿಂದಿನ ಪಂದ್ಯದಲ್ಲಿ 10 ರನ್ಗಳಿಗೆ ಔಟಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




