ಐಪಿಎಲ್ 2024: ಆರ್ ಸಿಬಿ ವಿರುದ್ಧದ ಪಂದ್ಯ, ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಫೀಲ್ಡಿಂಗ್ ಆಯ್ಕೆ

ಜೈಪುರ: ಇಲ್ಲಿನ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಇಂದು ಸಂಜೆ ನಡೆಯುತ್ತಿರುವ ಆರ್ ಸಿಬಿ ವಿರುದ್ಧದ ಐಪಿಎಲ್ 2024 ರ 19 ನೇ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರು ಮೊದಲಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.
ನಾಯಕ ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್ ಮತ್ತು ರಜತ್ ಪಾಟಿದಾರ್ ಅವರನ್ನೊಳಗೊಂಡ ಆರ್‌ಸಿಬಿ ಅಗ್ರ ಕ್ರಮಾಂಕದ ಬ್ಯಾಟಿಂಗ್ ಪಡೆ ಹೊಂದಿದೆ. ಆದರೆ 203 ರನ್‌ಗಳೊಂದಿಗೆ ಆರೆಂಜ್ ಕ್ಯಾಪ್ ಹೊಂದಿರುವ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಎರಡು ಅರ್ಧಶತಕಗಳನ್ನು ಗಳಿಸಿದ್ದು ಬಿಟ್ಟರೆ ಅವರಲ್ಲಿ ಯಾರೂ ಕೂಡಾ ಅಬ್ಬರಿಸುತ್ತಿಲ್ಲ.
ಇನ್ನೂ ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಯಶಸ್ವಿ ಜೈಸ್ವಾಲ್ ಇತ್ತೀಚಿಗೆ ಫಾರ್ಮ್ ಗೆ ಮರಳಲು ಪ್ರಯತ್ನಿಸುತ್ತಿದ್ದಾರೆ. ಆದರೆ ಎಡಗೈ ಓಪನರ್ ಮೂರು ಪಂದ್ಯಗಳಿಂದ ಕೇವಲ 39 ರನ್ ಗಳಿಸಿದ್ದಾರೆ ಮತ್ತು ಜೋಸ್ ಬಟ್ಲರ್ ಅವರದ್ದು ಇದೇ ಕಥೆ. ಮೂರು ಪಂದ್ಯಗಳಿಂದ ಕೇವಲ 35 ರನ್ ಗಳಿಸಿದ್ದಾರೆ.
ಆರ್ ಸಿಬಿ ತಂಡ ಇಂತಿದೆ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ಸಿ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್) ಸೌರವ್ ಚೌಹಾಣ್, ರೀಸ್ ಟೋಪ್ಲಿ, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್
ರಾಜಸ್ಥಾನ ರಾಯಲ್ಸ್ ತಂಡ ಇಂತಿದೆ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) ರಿಯಾನ್ ಪರಾಗ್, ಧ್ರುವ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ನಾಂದ್ರೆ ಬರ್ಗರ್, ಯುಜ್ವೇಂದ್ರ ಚಾಹಲ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


