IPL 2024: ಗುಜರಾತ್ ವಿರುದ್ಧ ಲಕ್ನೋಗೆ ತವರಿನಲ್ಲಿ 33 ರನ್ ಭರ್ಜರಿ ಗೆಲುವು
ಇಂಡಿಯನ್ ಪ್ರೀಮಿಯರ್ ಲೀಗ್ 2024ರ 21ನೇ ಪಂದ್ಯದಲ್ಲಿ ಭಾನುವಾರ ಗುಜರಾತ್ ಜೈಂಟ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 33 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ.

ಲಖನೌ: ಇಂಡಿಯನ್ ಪ್ರೀಮಿಯರ್ ಲೀಗ್ 2024ರ 21ನೇ ಪಂದ್ಯದಲ್ಲಿ ಭಾನುವಾರ ಗುಜರಾತ್ ಜೈಂಟ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 33 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ.
ಇಂದು ಅಟಲ್ಬಿಹಾರಿ ವಾಜಪೇಯಿ ಸ್ಟೇಡಿಯಮ್ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಲಕ್ನೋ, ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 163 ರನ್ ಗಳಿಸಿತು.
ಗೆಲುವಿಗೆ 164 ರನ್ ಗಳ ಗುರಿ ಬೆನ್ನತ್ತಿದ ಗುಜರಾತ್ ತಂಡ 18.5 ಓವರ್ಗಳಲ್ಲಿ 130 ರನ್ಗಳಿಗೆ ಆಲ್ಔಟ್ ಆಗಿ ಸೋಲೊಪ್ಪಿಕೊಂಡಿತು.
ಮಾರ್ಕಸ್ ಸ್ಟೊಯ್ನಿಸ್ (43 ಎಸೆತಕ್ಕೆ 58 ರನ್) ಅರ್ಧ ಶತಕ ಹಾಗೂ ಬೌಲರ್ಗಳಾದ ಯಶ್ ಠಾಕೂರ್ (3.5 ಓವರ್, 30 ರನ್, 5 ವಿಕೆಟ್) ಹಾಗೂ ಕೃಣಾಲ್ ಪಾಂಡ್ಯ (4 ಓವರ್ 11 ರನ್, 3 ವಿಕೆಟ್) ಮಾರಕ ಬೌಲಿಂಗ್ ದಾಳಿಗೆ ನಲುಗಿದ ಗುಜರಾತ್ ಜೈಂಟ್ಸ್ ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 33 ರನ್ಗಳಿಂದ ಸೋಲು ಅನುಭವಿಸಿತು.
ಇದು ಗುಜರಾತ್ ತಂಡಕ್ಕೆ ಹಾಲಿ ಆವೃತ್ತಿಯಲ್ಲಿ ಆಡಿರುವ 5 ಪಂದ್ಯಗಳಲ್ಲಿ ಮೂರನೇ ಸೋಲು. ಇದೇ ವೇಳೆ ಕೆ. ಎಲ್ ರಾಹುಲ್ ನೇತೃತ್ವದ ಲಕ್ನೋ ತಂಡ ಹ್ಯಾಟ್ರಿಕ್ ಜಯವನ್ನು ತನ್ನದಾಗಿಸಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



