IPL 2024: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 7 ವಿಕೆಟ್‌ಗಳ ಜಯ
2024ರ ಇಂಡಿಯನ್ ಪ್ರೀಮಿಯರ್ ಲೀಗ್ ನ 22ನೇ ಪಂದ್ಯದಲ್ಲಿ ಸೋಮವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಲಖನೌ: 2024ರ ಇಂಡಿಯನ್ ಪ್ರೀಮಿಯರ್ ಲೀಗ್ ನ 22ನೇ ಪಂದ್ಯದಲ್ಲಿ ಸೋಮವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಆ ಮೂಲಕ ಕಳೆದ ಎರಡು ಪಂದ್ಯಗಳಲ್ಲಿ ಸೋತಿದ್ದ ಚೆನ್ನೈ, ಇದೀಗ ಗೆಲುವಿನ ಲಯಕ್ಕೆ ಮರಳಿದೆ.
ಇಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತರು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದಕೋಲ್ಕತ್ತಾ ನೈಟ್ ರೈಡರ್ಸ್ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಿತು.
ಗೆಲುವಿಗೆ 138 ರನ್ ಗಳ ಗುರಿ ಬೆನ್ನತ್ತಿದ ಚೆನ್ನೈ, ರವೀಂದ್ರ ಜಡೇಜಾ (18ಕ್ಕೆ 3) ಅವರ ಸ್ಪಿನ್ ಮೋಡಿ ಹಾಗೂ ಋತುರಾಜ್ ಗಾಯಕ್ವಾಡ್ (67*) ಅವರ ಅರ್ಧಶತಕದ ನೆರವಿನಿಂದ 17.4 ಓವರ್‌ಗಳಲ್ಲಿ 141 ರನ್ ಗಳಿಸುವ ಮೂಲಕ 7 ವಿಕೆಟ್‌ಗಳ ಜಯ ಸಾಧಿಸಿತು.
ಚೆನ್ನೈ ಪರ ನಾಯಕ ಋತುರಾಜ್ ಗಾಯಕ್ವಾಡ್ ಆಕರ್ಷಕ ಅರ್ಧಶತಕ ಸಿಡಿಸಿದರು. ಎದುರಿಸಿದ 58 ಎಸೆತಗಳಲ್ಲಿ 9 ಬೌಂಡರಿಗಳೊಂದಿಗೆ ಅಜೇಯ 67 ರನ್ ಗಳಿಸಿದರು. ಇವರಿಗೆ ನೆರವು ನೀಡಿದ ಡ್ಯಾರಿಲ್ ಮಿಚೆಲ್ 25 ರನ್ ಹಾಗೂ ಶಿವಂ ದುಬೆ 28 ರನ್ ಗಳಿಸಿ ತಂಡದ ಗೆಲುವಿಗೆ ನೆರವಾದರು.
ಇನ್ನು ಅನಿರೀಕ್ಷಿತವಾಗಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಕೋಲ್ಕತ್ತಾ, ಸುನೀಲ್ ನರೇನ್ (27), ಅಂಗಕೃಷ್ ರಘುವಂಶಿ (24) ಹಾಗೂ ಶ್ರೇಯಸ್ ಅಯ್ಯರ್ (34) ಸಿಕ್ಕ ಉತ್ತಮ ಆರಂಭದಲ್ಲಿ ದೊಡ್ಡ ಮೊತ್ತವನ್ನು ಕಲೆ ಹಾಕುವಲ್ಲಿ ವಿಫಲರಾದರು. ಇನ್ನುಳಿದ ಬ್ಯಾಟರ್‌ಗಳು ಕನಿಷ್ಠ ವೈಯಕ್ತಿಕ 15 ರನ್ ಗಳಿಸಲು ಕೂಡ ಸಾಧ್ಯವಾಗಲಿಲ್ಲ. ಇದರ ಪರಿಣಾಮವಾಗಿ ಕೆಕೆಆರ್ 20 ಓವರ್‌ಗಳಿಗೆ 9 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



