IPL 2024: ರಾಜಸ್ಥಾನ ವಿರುದ್ಧ ಗುಜರಾತ್ ಗೆ 3 ವಿಕೆಟ್ಗಳ ರೋಚಕ ಗೆಲುವು
2024ರ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಬುಧವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಮೂರು ವಿಕೆಟ್ಗಳ ರೋಚಕ ಗೆಲುವು ಸಾಧಿಸಿದೆ.

ಜೈಪುರ: 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಬುಧವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಮೂರು ವಿಕೆಟ್ಗಳ ರೋಚಕ ಗೆಲುವು ಸಾಧಿಸಿದೆ.
ಇಂದು ಜೈಪುರದ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್, ಸಂಜು ಸಾಮ್ಸನ್ ಹಾಗೂ ರಿಯಾನ್ ಪರಾಗ್ ಅವರ ಅದ್ಭುತ ಆಟದಿಂದಾಗಿ ನಿಗದಿತ 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 196 ರನ್ ಗಳ ಬೃಹತ್ ಮೊತ್ತ ಸೇರಿಸಿತು.
ಗೆಲುವಿಗೆ 197 ರನ್ ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಗುಜರಾತ್ ತಂಡಕ್ಕೆ ಆರಂಭಿಕ ಆಟಗಾರ ಸಾಯಿ ಸುದರ್ಶನ್(35) ಮತ್ತು ನಾಯಕ ಶುಭಮನ್ ಗಿಲ್(72) ಬಿರುಸಿನ ಬ್ಯಾಟಿಂಗ್ ಮೂಲಕ ಉತ್ತಮ ಆರಂಭ ಒದಗಿಸಿದರು. ನಂತರ ಗುಜರಾತ್ ತಂಡ ದಿಟ್ಟ ಬ್ಯಾಟಿಂಗ್ ಹೋರಾಟ ನಡೆಸಿ ಭರ್ತಿ 20 ಓವರ್ ಆಡಿ 7 ವಿಕೆಟ್ ನಷ್ಟಕ್ಕೆ 199 ರನ್ ಬಾರಿಸಿ ಗೆಲುವಿನ ನಗೆ ಬೀರಿತು.
ಕೊನೆಯಲ್ಲಿ ರಾಹುಲ್ ತೆವಾಟಿಯ 11 ಎಸೆತಗಳಲ್ಲಿ 22 ರನ್ ಬಾರಿಸಿದರೆ, ರಶೀದ್ ಖಾನ್ 11 ಎಸೆತಗಳಲ್ಲಿ ಅಜೇಯ 24 ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.
ಇನ್ನು 150ನೇ ಐಪಿಎಲ್ ಪಂದ್ಯವನ್ನಾಡಿದ ಯಜುವೇಂದ್ರ ಚಹಲ್ ಅವರು 4 ಓವರ್ ಬೌಲಿಂಗ್ನಡೆಸಿ 2 ವಿಕೆಟ್ ಪಡೆದರು. ಮಧ್ಯ ಪ್ರದೇಶದ ಮೂಲದ ಯುವ ವೇಗಿ ಕುಲ್ದೀಪ್ ಸೇನ್ ಘಾತಕ ಬೌಲಿಂಗ್ ದಾಳಿ ನಡೆಸಿ ಮೂರು ವಿಕೆಟ್ ಕಬಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



