IPL 2024: ಆರ್ ಸಿಬಿ ವಿರುದ್ಧದ ಪಂದ್ಯ, ಟಾಸ್ ಗೆದ್ದ ಮುಂಬೈ, ಬೌಲಿಂಗ್ ಆಯ್ಕೆ
ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ಸಂಜೆ ನಡೆಯುತ್ತಿರುವ ಐಪಿಎಲ್ 2024ರ ಆವೃತ್ತಿಯ 25 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಿವೆ.

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ಸಂಜೆ ನಡೆಯುತ್ತಿರುವ ಐಪಿಎಲ್ 2024ರ ಆವೃತ್ತಿಯ 25 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಿವೆ.
ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡರು. ನಂತರ ಮಾತನಾಡಿದ ಪಾಂಡ್ಯ, ಹೊಸ ಬಾಲ್ ನೊಂದಿಗೆ ಆರಂಭದಲ್ಲಿಯೇ ಬ್ಯಾಟರ್ ಗಳ ಮೇಲೆ ಒತ್ತಡ ಹೇರಲು ಬಯಸುವುದಾಗಿ ತಿಳಿಸಿದರು.ಇಂದಿನ ಪಂದ್ಯದಲ್ಲಿ ಮುಂಬೈ ತಂಡದಲ್ಲಿ ಪಿಯೂಸ್ ಚಾವ್ಲಾ ಬದಲಿಗೆ ಶ್ರೇಯಸ್ ಆಟವಾಡುತ್ತಿದ್ದಾರೆ.
ಆರ್ ಸಿಬಿ ನಾಯಕ ಫಾಪ್ ಡು ಪ್ಲೆಸಿಸ್ ಮಾತನಾಡಿ, ಇಂದಿನ ಪಂದ್ಯದಲ್ಲಿ ಹೊಸಬರಿಗೆ ಅವಕಾಶ ನೀಡಲಾಗುವುದು, ಸಾಧ್ಯವಾದರೆ ಒಂದಿಷ್ಟು ಬದಲಾವಣೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು. ಕನ್ನಡಿಗ ವೈಶಾಖ್ ಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ.
ಮುಂಬೈ ತಂಡ ಇಂತಿದೆ: ರೋಹಿತ್ ಶರ್ಮಾ, ಇಶಾನ್ ಕಿಶನ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ(ನಾಯಕ) ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಮೊಹಮ್ಮದ್ ನಬಿ, ಶ್ರೇಯಸ್ ಗೋಪಾಲ್, ಜಸ್ಪ್ರೀತ್ ಬುಮ್ರಾ, ಜೆರಾಲ್ಡ್ ಕೋಟ್ಜಿ, ಆಕಾಶ್ ಮಧ್ವಾಲ್
ಆರ್ ಸಿಬಿ ತಂಡ ಇಂತಿದೆ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ) ವಿಲ್ ಜಾಕ್ಸ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್) ಮಹಿಪಾಲ್ ಲೊಮ್ರೋರ್, ರೀಸ್ ಟೋಪ್ಲೆ, ವಿಜಯ್‌ಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


