RR vs GT: ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್‌ಗೆ 12 ಲಕ್ಷ ರೂ. ದಂಡ!
ಜೈಪುರದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2024ನೇ ಆವೃತ್ತಿಯ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್‌ಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

ಜೈಪುರ: ಇಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2024ನೇ ಆವೃತ್ತಿಯ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್‌ಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.
ಬುಧವಾರ ನಡೆದ ರೋಚಕ ಪಂದ್ಯದಲ್ಲಿ ಮೂರು ವಿಕೆಟ್‌ಗಳ ಅಂತರದಿಂದ ಶುಭಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆಲುವು ಸಾಧಿಸಿದೆ. ಆಡಿರುವ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು ಸಾಧಿಸುವ ಮೂಲಕ ಜಿಟಿ ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದೆ.
'ಏಪ್ರಿಲ್ 10 ರಂದು ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ರ ಪಂದ್ಯದಲ್ಲಿ ತಮ್ಮ ತಂಡವು ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರಿಗೆ ದಂಡ ವಿಧಿಸಲಾಗಿದೆ' ಎಂದು ಐಪಿಎಲ್ ಹೇಳಿಕೆ ತಿಳಿಸಿದೆ.
'ಇದು ಐಪಿಎಲ್‌ನ ನೀತಿ ಸಂಹಿತೆಯಡಿಯಲ್ಲಿ ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಈ ಋತುವಿನಲ್ಲಿ ಅವರ ತಂಡದ ಮೊದಲ ಅಪರಾಧವಾಗಿರುವುದರಿಂದ, ಸ್ಯಾಮ್ಸನ್‌ಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ" ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.

'ಇದು ಐಪಿಎಲ್‌ನ ನೀತಿ ಸಂಹಿತೆ ಅಡಿಯಲ್ಲಿ ಈ ಆವೃತ್ತಿಯ ಮೊದಲ ಅಪರಾಧವಾಗಿದ್ದು, ಸ್ಲೋ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕೆ ಸಂಬಂಧಿಸಿದಂತೆ ಸ್ಯಾಮ್ಸನ್‌ಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ' ಎಂದಿದೆ.
ಸ್ಯಾಮ್ಸನ್ 38 ಎಸೆತಗಳಲ್ಲಿ ಅಜೇಯ 68 ರನ್ ಗಳಿಸಿದರು ಮತ್ತು ರಿಯಾನ್ ಪರಾಗ್ (78) ತಂಡಕ್ಕೆ ನೆರವಾದರು. ರಾಜಸ್ಥಾನ್ ರಾಯಲ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿತು.
ಗುಜರಾತ್ ಟೈಟಾನ್ಸ್ ನಾಯಕ ಗಿಲ್ 72 ರನ್ ಗಳಿಸಿದರೆ, ಅಫ್ಘಾನಿಸ್ತಾನದ ಸ್ಪಿನ್ನರ್ ರಶೀದ್ ಖಾನ್ 11 ಎಸೆತಗಳಲ್ಲಿ 24 ರನ್ ಗಳಿಸಿದ್ದು ತಂಡವನ್ನು ಗೆಲುವಿನ ದಡ ಸೇರಿಸಲು ನೆರವಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




