IPL 2024: ಐಪಿಎಲ್ ಇತಿಹಾಸದಲ್ಲೆ ದಾಖಲೆಯ ರನ್ ಗಳಿಸಿದ ಹೈದರಾಬಾದ್ ತಂಡ!
ಬೆಂಗಳೂರಿನಲ್ಲಿ ನಡೆಯುತ್ತಿರುವ RCB-SRH ನಡುವಿನ ಐಪಿಎಲ್-2024 ಪಂದ್ಯದಲ್ಲಿ ಹೈದರಾಬಾದ್ ತಂಡ ದಾಖಲೆಯ ಗರಿಷ್ಠ ರನ್ ಗಳಿಸಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ RCB-SRH ನಡುವಿನ ಐಪಿಎಲ್-2024 ಪಂದ್ಯದಲ್ಲಿ ಹೈದರಾಬಾದ್ ತಂಡ ದಾಖಲೆಯ ಗರಿಷ್ಠ ರನ್ ಗಳಿಸಿದೆ.
ಆರ್ ಸಿಬಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ನಿಗದಿತ 20 ಓವರ್ ಗಳಲ್ಲಿ ಆತಿಥೇಯ ತಂಡ 3 ವಿಕೆಟ್ ಗಳ ನಷ್ಟಕ್ಕೆ 287 ರನ್ ಗಳಿಸಿದೆ.
ಇದು ಐಪಿಎಲ್ ಇತಿಹಾಸದಲ್ಲಿಯೇ ಅತ್ಯಂತ ಗರಿಷ್ಠ ಸ್ಕೋರ್ ಆಗಿದೆ. ಈ ಹಿಂದಿದ್ದ ಗರಿಷ್ಠ ಸ್ಕೋರ್ ಸಹ ಸನ್ ರೈಸರ್ಸ್ ಹೈದರಾಬಾದ್ ತಂಡದ್ದೇ ಆಗಿದ್ದು, ಆರ್ ಸಿಬಿ ವಿರುದ್ಧವೇ ಈ ಹಿಂದಿನ ಬಾರಿಯೂ SRH ಗರಿಷ್ಠ ಸ್ಕೋರ್ ದಾಖಲಿಸಿತ್ತು.
ಇದೇ ಟೂರ್ನಿಯಲ್ಲಿ ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಎಸ್ ಆರ್ ಹೆಚ್ ತಂಡ 3 ವಿಕೆಟ್ ನಷ್ಟಕ್ಕೆ 277 ರನ್ ಗಳಿಸಿ ಗರಿಷ್ಠ ಸ್ಕೋರ್ ದಾಖಲಿಸಿತ್ತು. ಗರಿಷ್ಠ ರನ್ ಗಳಿಸಿರುವ ತಂಡಗಳ ಸಾಲಿನಲ್ಲಿ ಮೂರನೇ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್ ತಂಡ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



