ಪಂದ್ಯದಿಂದ ನನ್ನನ್ನು ಹೊರಗಿಡಿ; RCB ನಾಯಕ ಫಾಫ್ ಡುಪ್ಲೆಸಿ ಬಳಿ ಮನವಿ ಮಾಡಿದ್ದ ಗ್ಲೆನ್ ಮ್ಯಾಕ್ಸ್‌ವೆಲ್
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಅವರು ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿಯಿಂದ ಅನಿರ್ದಿಷ್ಟ ಅವಧಿಗೆ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಅವರು ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿಯಿಂದ ಅನಿರ್ದಿಷ್ಟ ಅವಧಿಗೆ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಸೋಮವಾರ ರಾತ್ರಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆರ್‌ಸಿಬಿ ಸೋಲಿನ ನಂತರ ಮ್ಯಾಕ್ಸ್‌ವೆಲ್ ಈ ಸುದ್ದಿಯನ್ನು ಬಹಿರಂಗಪಡಿಸಿದ್ದಾರೆ.
ಕಳಪೆ ಫಾರ್ಮ್‌ನಿಂದಾಗಿ ಸಾಕಷ್ಟು ಟೀಕೆಗಳನ್ನು ಎದುರಿಸಿದ ಮ್ಯಾಕ್ಸ್‌ವೆಲ್, ಎಸ್‌ಆರ್‌ಹೆಚ್ ವಿರುದ್ಧದ ಪ್ಲೇಯಿಂಗ್ XI ನ ಭಾಗವಾಗಿರಲಿಲ್ಲ. ಮ್ಯಾಕ್ಸ್‌ವೆಲ್ ಬದಲಿಗೆ ತಂಡದಲ್ಲಿ ವಿಲ್ ಜ್ಯಾಕ್ಸ್ ಅವರಿಗೆ ಅವಕಾಶ ನೀಡಲಾಗಿತ್ತು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮ್ಯಾಕ್ಸ್‌ವೆಲ್, ಈ ಸಮಯದಲ್ಲಿ ನಾನು ಉತ್ತಮ 'ಮಾನಸಿಕ ಮತ್ತು ದೈಹಿಕ' ಸಾಮರ್ಥ್ಯ ಹೊಂದಿಲ್ಲ. ಹೀಗಾಗಿ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದೆ. ವೈಯಕ್ತಿಕವಾಗಿ ನನಗೆ ಇದು ಬಹಳ ಸುಲಭವಾದ ನಿರ್ಧಾರವಾಗಿತ್ತು ಎಂದಿದ್ದಾರೆ.
'ಕಳೆದ ಪಂದ್ಯದ ನಂತರ ನಾನು ಫಾಫ್ ಡು ಪ್ಲೆಸಿಸ್ ಮತ್ತು ತರಬೇತುದಾರರ ಬಳಿಗೆ ಹೋದೆ ಮತ್ತು ನನ್ನ ಬದಲಿಗೆ ತಂಡದಲ್ಲಿ ಬೇರೊಬ್ಬರಿಗೆ ಅವಕಾಶ ನೀಡುವಂತೆ ಹೇಳಿದೆ. ನನಗೆ ಸ್ವಲ್ಪ ಮಾನಸಿಕ ಮತ್ತು ದೈಹಿಕ ವಿರಾಮವನ್ನು ಪಡೆಯಲು ಇದು ಉತ್ತಮ ಸಮಯ ಎಂದು ನಾನು ಭಾವಿಸುತ್ತೇನೆ. ಒಂದು ವೇಳೆ ನಾನು ಯಾವುದೇ ಪಂದ್ಯದಲ್ಲಿ ಆಡಬೇಕಾದರೆ, ನಾನು ನಿಜವಾಗಿಯೂ ದೃಢವಾದ ಮಾನಸಿಕ ಸ್ಥಿತಿ ಮತ್ತು ಅತ್ಯುತ್ತಮ ದೈಹಿಕ ಸಾಮರ್ಥ್ಯದಿಂದ ಮರಳಬಹುದು' ಎಂದಿದ್ದಾರೆ.
'ನಾವು ಪವರ್‌ಪ್ಲೇ ನಂತರ ಸಾಕಷ್ಟು ದೊಡ್ಡ ಕೊರತೆಯನ್ನು ಹೊಂದಿದ್ದೇವೆ, ಇದು ಕಳೆದ ಎರಡು ಆವೃತ್ತಿಗಳಲ್ಲಿ ನನ್ನ ಶಕ್ತಿಯ ಕ್ಷೇತ್ರವಾಗಿತ್ತು. ಇದೀಗ ನಾನು ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿಲ್ಲ ಎಂದು ನನಗೆ ಅನಿಸಿತು. ಬೇರೆ ಆಟಗಾರರಿಗೆ ತಂಡದಲ್ಲಿ ಅವಕಾಶ ನೀಡಲು ಇದು ಉತ್ತಮ ಸಮಯ ಎಂದು ನಾನು ಭಾವಿಸುತ್ತೇನೆ ಮತ್ತು ಆಶಾದಾಯಕವಾಗಿ ಯಾರಾದರೂ ಆ ಸ್ಥಳವನ್ನು ತಮ್ಮದಾಗಿಸಿಕೊಳ್ಳಬಹುದು' ಎಂದು ಮ್ಯಾಕ್ಸ್‌ವೆಲ್ ತಿಳಿಸಿದ್ದು, ಎಲ್ಲಿಯವರೆಗೂ ವಿರಾಮ ತೆಗೆದುಕೊಳ್ಳಲಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಿಲ್ಲ.
ಮಾನಸಿಕ ಆಯಾಸದಿಂದ ಮ್ಯಾಕ್ಸ್‌ವೆಲ್ ಆಟದಿಂದ ವಿರಾಮ ತೆಗೆದುಕೊಂಡಿರುವುದು ಇದೇ ಮೊದಲಲ್ಲ.
ಇದಕ್ಕೂ ಮೊದಲು, ಭಾರತೀಯ ಕ್ರಿಕೆಟ್ ದಂತಕಥೆ ಸುನೀಲ್ ಗವಾಸ್ಕರ್ ಅವರು ಐಪಿಎಲ್‌ನಲ್ಲಿನ ಕಳಪೆ ಪ್ರದರ್ಶನಕ್ಕಾಗಿ ಮ್ಯಾಕ್ಸ್‌ವೆಲ್ ಅವರನ್ನು ಟೀಕಿಸಿದ್ದರು. ಆಸೀಸ್ ಆಟಗಾರ ವೇಗದ ಬೌಲಿಂಗ್‌ನಲ್ಲಿ ಆಡಲು ಸಾಧ್ಯವಾಗುತ್ತಿಲ್ಲ ಎಂದಿದ್ದರು.
ಐಪಿಎಲ್ 2024ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಅತ್ಯುತ್ತಮ ಪ್ರದರ್ಶನ ನೀಡುವಲ್ಲಿ ಎಡವಿದ್ದು, ಆಡಿರುವ 7 ಪಂದ್ಯಗಳಲ್ಲಿ ಒಂದು ಪಂದ್ಯ ಮಾತ್ರ ಗೆದ್ದಿದೆ ಮತ್ತು ಆರು ಪಂದ್ಯಗಳಲ್ಲಿ ಸತತ ಸೋಲು ಕಂಡಿದೆ. ಹೀಗಾಗಿ, ತಂಡದಲ್ಲಿ ಬದಲಾವಣೆ ಮಾಡಬೇಕೆನ್ನುವ ಕೂಗು ಕೇಳಿಬಂದಿತ್ತು.
ಅದರಂತೆ ಸೋಮವಾರ ನಡೆದ ಎಸ್‌ಆರ್‌ಎಚ್ ವಿರುದ್ಧದ ಪಂದ್ಯದಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿತ್ತು. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಮ್ಯಾಕ್ಸ್‌ವೆಲ್ ಬೆರಳಿಗೆ ಗಾಯವಾಗಿತ್ತು. ಹೀಗಾಗಿ, ಸನ್‌ರೈಸಸ್ ಹೈದರಾಬಾದ್ ವಿರುದ್ಧದ ಪಂದ್ಯದಿಂದ ಅವರು ಹೊರಗುಳಿದಿದ್ದರು. ಮ್ಯಾಕ್ಸ್‌ವೆಲ್ ಬದಲಿಗೆ ಲಾಕಿ ಫರ್ಗ್ಯುಸನ್ ಆಡಿದ್ದರು. ಈ ಆವೃತ್ತಿಯಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡುವಲ್ಲಿ ವಿಫಲವಾಗಿರುವ ಮೊಹಮ್ಮದ್ ಸಿರಾಜ್ ಅವರಿಗೂ ವಿಶ್ರಾಂತಿ ನೀಡಿ, ಯಶ್ ದಯಾಳ್ ಅವರನ್ನು ಆಡಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




