IPL 2024: ಕೆಕೆಆರ್ ವಿರುದ್ಧ 2 ವಿಕೆಟ್ ಗೆಲುವು ಸಾಧಿಸಿದ ರಾಜಸ್ಥಾನ ರಾಯಲ್ಸ್
ಈಡನ್ ಗಾರ್ಡನ್ ಸ್ಟೇಡಿಯಂನಲ್ಲಿ ಮಂಗಳವಾರ ರಾತ್ರಿ ನಡೆದ ಐಪಿಎಲ್ 2024 ಟೂರ್ನಿಯ 31ನೇ ಪಂದ್ಯದಲ್ಲಿ ಕೆಕೆಆರ್ ವಿರುದ್ದ 2 ವಿಕೆಟ್ ಗಳಿಂದ ರಾಜಸ್ಥಾನ ರಾಯಲ್ಸ್ ಗೆಲುವು ಸಾಧಿಸಿದೆ.

ಕೊಲ್ಕತ್ತಾ: ಇಲ್ಲಿನ ಈಡನ್ ಗಾರ್ಡನ್ ಸ್ಟೇಡಿಯಂನಲ್ಲಿ ಮಂಗಳವಾರ ರಾತ್ರಿ ನಡೆದ ಐಪಿಎಲ್ 2024 ಟೂರ್ನಿಯ 31ನೇ ಪಂದ್ಯದಲ್ಲಿ ಕೆಕೆಆರ್ ವಿರುದ್ದ 2 ವಿಕೆಟ್ ಗಳಿಂದ ರಾಜಸ್ಥಾನ ರಾಯಲ್ಸ್ ಗೆಲುವು ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 223 ರನ್ ಗಳಿಸಿತು.
ಸುನೀಲ್ ನರೈನ್ 6 ಸಿಕ್ಸರ್, 13 ಬೌಂಡರಿಗಳೊಂದಿಗೆ 56 ಎಸೆತಗಳಲ್ಲಿ 109 ರನ್ ಸಿಡಿಸಿದರು. ಉಳಿದಂತೆ ರಘುವಂಶಿ 30, ನಾಯಕ ಶ್ರೇಯಸ್ ಅಯ್ಯರ್, 11, ಆಂಡ್ರೆ ರಸೆಲ್ 13, ರಿಂಕು ಸಿಂಗ್ ಅಜೇಯ 20. ವೆಂಕಟೇಶ್ ಅಯ್ಯರ್ 8 ರನ್ ಗಳಿಸಿದರು. ಇದರೊಂದಿಗೆ ರಾಜಸ್ಥಾನ ರಾಯಲ್ಸ್ ಗೆ 224 ರನ್ ಗಳ ಗೆಲುವಿನ ಗುರಿ ನೀಡಲಾಯಿತು.
ಈ ಗುರಿ ಬೆನ್ನಟ್ಟಿದ್ದ ರಾಜಸ್ಥಾನ ರಾಯಲ್ಸ್ ಪರ ಯಶಸ್ವಿ ಜೈಸ್ವಾಲ್ 19, ಜೊಸ್ ಬಟ್ಲರ್ ಅಜೇಯ 107, ನಾಯಕ ಸಂಜು ಸ್ಯಾಮ್ಸನ್ 12, ರಿಯಾನ್ ಪರಾಗ್ 34, ಪೊವೆಲ್ 26 ರನ್ ಗಳಿಸಿದರು.ಇದರೊಂದಿಗೆ ರಾಜಸ್ಥಾನ ರಾಯಲ್ಸ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 224 ಗಳಿಸುವುದರೊಂದಿಗೆ ಗೆಲುವು ಸಾಧಿಸಿತು. ಜೊಸ್ ಬಟ್ಲರ್ ಫ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



