ಕ್ರಿಕೆಟ್

BGT 2025 3rd Test: 2ನೇ ದಿನದಾಟ ಅಂತ್ಯ, ಬೃಹತ್ ಮೊತ್ತದತ್ತ ಕಮಿನ್ಸ್ ಪಡೆ, Aus 405/7

ನಿನ್ನೆ ಆರಂಭವಾಗಿದ್ದ 3ನೇ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿತ್ತು. ಹೀಗಾಗಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ್ದ ಆಸ್ಟ್ರೇಲಿಯಾ ಮೊದಲ ದಿನ ವಿಕೆಟ್ ನಷ್ಟವಿಲ್ಲದೇ 28 ರನ್‌ಗಳಿಸಿತ್ತು.

BGT 2025 3rd Test: 2ನೇ ದಿನದಾಟ ಅಂತ್ಯ, ಬೃಹತ್ ಮೊತ್ತದತ್ತ ಕಮಿನ್ಸ್ ಪಡೆ, Aus 405/7
ಆಸ್ಟ್ರೇಲಿಯಾ vs ಭಾರತ
Published On :

ಬ್ರಿಸ್ಬೇನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3ನೇ ಟೆಸ್ಟ್ ಪಂದ್ಯದ 2ನೇ ದಿನದಾಟ ಅಂತ್ಯವಾಗಿದ್ದು, ಭರ್ಜರಿ ಬ್ಯಾಟಿಂಗ್ ನಡೆಸಿರುವ ಆಸ್ಟ್ರೇಲಿಯಾ ತಂಡ 2ನೇ ದಿನದಾಟದ ಅಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 405 ರನ್ ಗಳಿಸಿದೆ.

ನಿನ್ನೆ ಆರಂಭವಾಗಿದ್ದ 3ನೇ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿತ್ತು. ಹೀಗಾಗಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ್ದ ಆಸ್ಟ್ರೇಲಿಯಾ ಮೊದಲ ದಿನ ವಿಕೆಟ್ ನಷ್ಟವಿಲ್ಲದೇ 28 ರನ್‌ಗಳಿಸಿತ್ತು.

ಇಂದು ಬ್ಯಾಟಿಂಗ್ ಮುಂದುವರೆಸಿದ ಆಸ್ಟ್ರೇಲಿಯಾ ಟ್ರಾವಿಸ್ ಹೆಡ್ (152 ರನ್) ಮತ್ತು ಸ್ಟೀವೆನ್ ಸ್ಮಿತ್ (101 ರನ್) ಶತಕಗಳ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 405 ರನ್ ಗಳಿಸಿದೆ. 2ನೇ ದಿನದಾಟದ ಅಂತ್ಯದ ವೇಳೆಗೆ 45 ರನ್ ಗಳಿಸಿರುವ ಅಲೆಕ್ಸ್ ಕರಿ ಮತ್ತು 7 ರನ್ ಗಳಿಸಿರುವ ಮಿಚೆಲ್ ಸ್ಟಾರ್ಕ್ 3ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಭಾರತದ ಪರ ಜಸ್ ಪ್ರೀತ್ ಬುಮ್ರಾ ಮತ್ತೆ ಭರ್ಜರಿ ಬೌಲಿಂಗ್ ಮಾಡಿ 5 ವಿಕೆಟ್ ಕಬಳಿಸಿದ್ದು, ಉಳಿದಂತೆ ಮಹಮದ್ ಸಿರಾಜ್ ಮತ್ತು ನಿತೀಶ್ ಕುಮಾರ್ ರೆಡ್ಡಿ ತಲಾ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.