Vijay Hazare Trophy: ಕ್ರಿಕೆಟ್ ಲೋಕದ ಅಪರೂಪದ ದಾಖಲೆ ಬರೆದ 13 ವರ್ಷದ Vaibhav Suryavanshi
ಕಳೆದ ತಿಂಗಳು ನಡೆದಿದ್ದ ಐಪಿಎಲ್ ಮೆಗಾ ಹರಾಜಿನಲ್ಲಿ 1.10 ಕೋಟಿ ರೂ.ಗೆ ರಾಜಸ್ಥಾನ್ ರಾಯಲ್ಸ್ ತಂಡದ ಪಾಲಾಗಿ ಅತಿ ಕಿರಿಯ ವಯಸ್ಸಿಗೆ ಐಪಿಎಲ್ ಲೋಕಕ್ಕೆ ಕಾಲಿಟ್ಟ ಟೀಂ ಇಂಡಿಯಾ ಕ್ರಿಕೆಟಿಗ ಎಂಬ ದಾಖಲೆ ಬರೆದಿದ್ದರು.

ಮುಂಬೈ: ಐಪಿಎಲ್ನಲ್ಲಿ ಅತಿ ಕಿರಿಯ ಆಟಗಾರನಾಗಿ ದಾಖಲೆ ಬರೆದಿದ್ದ 13 ವರ್ಷದ ವೈಭವ್ ಸೂರ್ಯವಂಶಿ ಇದೀಗ ವಿಜಯ್ ಹಜಾರೆ ಟ್ರೋಫಿಯಲ್ಲೂ ಅಪರೂಪದ ದಾಖಲೆಗೆ ಪಾತ್ರರಾಗಿದ್ದಾರೆ.
ಹೌದು.. ನಿನ್ನೆಯಿಂದ ಆರಂಭವಾಗಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಮಧ್ಯಪ್ರದೇಶ ವಿರುದ್ಧದ ಪಂದ್ಯದಲ್ಲಿ ಬಿಹಾರ ತಂಡದ ಪರ ಕಣಕ್ಕಿಳಿಯುವ ಮೂಲಕ ವೈಭವ್ ಸೂರ್ಯವಂಶಿ ಈಗ ಲಿಸ್ಟ್-ಎ ಪಂದ್ಯ ಆಡಿದ ಅತ್ಯಂತ ಕಿರಿಯ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ವೈಭವ್ ಸೂರ್ಯವಂಶಿ ಅವರು 13 ವರ್ಷ 269 ದಿನದಲ್ಲಿ ಬಿಹಾರದ ಪರ ತಮ್ಮ ಮೊದಲ ಪಂದ್ಯವನ್ನು ಆಡಿದ್ದು, ಈ ಮೂಲಕ ಅವರು 1999/2000 ದೇಶೀಯ ಸೀಸನ್ನಲ್ಲಿ 14 ವರ್ಷ ಮತ್ತು 51 ದಿನದಲ್ಲಿ ತಮ್ಮ ಲಿಸ್ಟ್-3 ಕ್ರಿಕೆಟ್ಗೆ ಪಾದಾರ್ಪಣೆ ಮಾಡುವ ಮೂಲಕ ಇತಿಹಾಸ ಸೃಷ್ಟಿಸಿದ್ದ ಅಲಿ ಅಕ್ಬರ್ನನ್ನು ಹಿಂದಿಕ್ಕಿದ್ದಾರೆ.
ಮೊದಲ ಪಂದ್ಯದಲ್ಲೇ ನಿರಾಶೆ
ಇನ್ನು ವಿಜಯ್ ಹಜಾರೆ ಟ್ರೋಫಿಯಲ್ಲಿನ ತಮ್ಮ ಮೊದಲ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ನಿರಾಶೆ ಅನುಭವಿಸಿದರು. ಅವರು ಆಡಿದ 2 ಎಸೆತಗಳಲ್ಲಿ ಕೇವಲ 4 ರನ್ ಗಳಿಸಿ ಔಟಾದರು. ಇದರ ಜೊತೆಗೆ ಬಿಹಾರ ತಂಡ ತನ್ನ ಮೊದಲ ಪಂದ್ಯದಲ್ಲೇ ಮಧ್ಯಪ್ರದೇಶ ವಿರುದ್ಧ 6 ವಿಕೆಟ್ಗಳ ಹೀನಾಯ ಸೋಲನ್ನು ಎದುರಿಸಬೇಕಾಯಿತು.
ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಿಹಾರ ತಂಡವು ಕೇವಲ 196 ರನ್ ಗಳಿಸಲಷ್ಟೇ ಶಕ್ತವಾಯಿತು. ಗೆಲ್ಲಲು 197 ರನ್ಗಳ ಗುರಿ ಪಡೆದ ಮಧ್ಯಪ್ರದೇಶ 24.5 ಓವರ್ಗಳು ಬಾಕಿ ಇರುವಂತೆಯೇ ಸುಲಭವಾಗಿ ಗೆಲುವಿನ ದಡ ಮುಟ್ಟಿತು.
ಐಪಿಎಲ್ ಸೆನ್ಸೇಷನ್ ವೈಭವ್ ಸೂರ್ಯವಂಶಿ
ಕಳೆದ ತಿಂಗಳು ನಡೆದಿದ್ದ ಐಪಿಎಲ್ ಮೆಗಾ ಹರಾಜಿನಲ್ಲಿ 1.10 ಕೋಟಿ ರೂ.ಗೆ ರಾಜಸ್ಥಾನ್ ರಾಯಲ್ಸ್ ತಂಡದ ಪಾಲಾಗಿ ಅತಿ ಕಿರಿಯ ವಯಸ್ಸಿಗೆ ಐಪಿಎಲ್ ಲೋಕಕ್ಕೆ ಕಾಲಿಟ್ಟ ಟೀಂ ಇಂಡಿಯಾ ಕ್ರಿಕೆಟಿಗ ಎಂಬ ದಾಖಲೆ ಬರೆದಿದ್ದ 13 ವರ್ಷದ ವೈಭವ್ ಸೂರ್ಯವಂಶಿ ಇದೀಗ ಲಿಸ್ಟ್ ಎ ಕ್ರಿಕೆಟ್ನಲ್ಲೂ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



