ಬುಮ್ರಾ, ಅಶ್ವಿನ್ ಮ್ಯಾಜಿಕ್: ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ನಲ್ಲಿ ಭಾರತಕ್ಕೆ ಭರ್ಜರಿ ಜಯ, ಸರಣಿ ಸಮಬಲ
ಇಂಗ್ಲೆಂಡ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಬಳಗವು ಗೆಲುವು ಸಾಧಿಸುವ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-1ರ ಸಮಬಲ ಸಾಧಿಸಿದೆ.

ವಿಶಾಖಪಟ್ಟಣಂ: ಇಂಗ್ಲೆಂಡ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಬಳಗವು ಗೆಲುವು ಸಾಧಿಸುವ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-1ರ ಸಮಬಲ ಸಾಧಿಸಿದೆ.
ವಿಶಾಖಪಟ್ಟಣಂನಲ್ಲಿ ನಡೆದ 2ನೇ ಟೆಸ್ಟ್ ನ 2ನೇ ಇನ್ನಿಂಗ್ಸ್ ನಲ್ಲಿ ಭಾರತ ನೀಡಿದ 399 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಇಂಗ್ಲೆಂಡ್ ತಂಡ 292 ರನ್ ಗಳಿಗೆ ಆಲೌಟ್ ಆಗುವ ಮೂಲಕ 106 ರನ್ ಗಳ ಅಂತರದಲ್ಲಿ ಸೋಲು ಕಂಡಿತು. ಆ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-1ರ (Test Series) ಸಮಬಲ ಸಾಧಿಸಿದೆ.
ಮೊದಲ ಇನ್ನಿಂಗ್ಸ್‌ನ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತ ತಂಡ ನೀಡಿದ 399 ರನ್‌ಗಳ ಬೃಹತ್ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡವು 292 ರನ್‌ಗಳಿಗೆ ಸರ್ವಪತನ ಕಂಡಿತು. ಇಂಗ್ಲೆಂಡ್ ಪರ ಜಾಕ್ ಕ್ರಾವ್ಲೆ (73) ಹೊರತುಪಡಿಸಿ ಯಾವೊಬ್ಬ ಆಟಗಾರನೂ ಉತ್ತಮ ಪ್ರದರ್ಶನ ತೋರದ ಕಾರಣ ಇಂಗ್ಲೆಂಡ್ 292 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿತು. ಭಾರತದ ಪರ ಜಸ್‌ಪ್ರೀತ್ ಬೂಮ್ರಾ ಹಾಗೂ ಕುಲದೀಪ್ ಯಾದವ್ ತಲಾ 3 ವಿಕೆಟ್ ಪಡೆದು ಮಿಂಚಿದರು.
ಉಭಯ ಇನ್ನಿಂಗ್ಸ್ ನಲ್ಲಿ 9 ವಿಕೆಟ್ ಪಡೆದು ಭಾರತದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ಬುಮ್ರಾ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಉಭಯ ತಂಡಗಳ ನಡುವಿನ ಮೂರನೇ ಟೆಸ್ಟ್ ಪಂದ್ಯವು ಫೆಬ್ರವರಿ 15ರಿಂದ ಆರಂಭವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


