ಅಂಡರ್ 19 ವಿಶ್ವಕಪ್ ಫೈನಲ್: ಭಾರತಕ್ಕೆ ಗೆಲ್ಲಲು 254 ರನ್ ಗುರಿ ನೀಡಿದ ಆಸ್ಟ್ರೇಲಿಯಾ!
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ICC U19 ಪುರುಷರ ಕ್ರಿಕೆಟ್ ವಿಶ್ವಕಪ್ 2024 ರ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯದ ಬ್ಯಾಟ್ಸ್ ಮನ್ ಹರ್ಜಸ್ ಸಿಂಗ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾದ ಟೆನ್ಷನ್ ಹೆಚ್ಚಿಸಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ICC U19 ಪುರುಷರ ಕ್ರಿಕೆಟ್ ವಿಶ್ವಕಪ್ 2024 ರ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯದ ಬ್ಯಾಟ್ಸ್ ಮನ್ ಹರ್ಜಸ್ ಸಿಂಗ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾದ ಟೆನ್ಷನ್ ಹೆಚ್ಚಿಸಿದ್ದಾರೆ.
ಈ ಪಂದ್ಯಾವಳಿಯ ಯಾವುದೇ ಪಂದ್ಯಗಳಲ್ಲಿ ಅವರು ಅತ್ಯುತ್ತಮ ಬ್ಯಾಟಿಂಗ್ ಮಾಡದಿದ್ದರೂ ಪ್ರಶಸ್ತಿ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಮಾಡಿ 64 ಎಸೆತಗಳಲ್ಲಿ 3 ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 55 ರನ್ ಗಳಿಸಿ ಭಾರತೀಯ ಬೌಲರ್‌ಗಳಿಗೆ ಕಂಟಕವಾದರು. ಪರಿಣಾಮ ಆಸ್ಟ್ರೇಲಿಯಾ 7 ವಿಕೆಟ್ ನಷ್ಟಕ್ಕೆ 253 ರನ್ ಬಾರಿಸಿದೆ.
ಆಸ್ಟ್ರೇಲಿಯಾ ಪರ ಹ್ಯಾರಿ ಡಿಕ್ಸನ್ 42, ಹಗ್ ವೈಬ್ಜೆನ್ 48 ಮತ್ತು ಒಲಿವರ್ ಪೀಕ್ ಅಜೇಯ 46 ರನ್ ಬಾರಿಸಿದ್ದಾರೆ. ಇನ್ನು ಭಾರತ ಪರ ರಾಜ್ ಲಿಂಬನಿ 3, ನಮನ್ ತಿವಾರಿ 2 ಮತ್ತು ಸೌಮಿ ಪಾಂಡೆ ಮತ್ತು ಮುಶೀರ್ ಖಾನ್ ತಲಾ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


