ಅರುಣಾಚಲ ಪ್ರದೇಶದಲ್ಲೂ ಕಾಂಗ್ರೆಸ್‌ಗೆ ಮರ್ಮಾಘಾತ: ಕಾಂಗ್ರೆಸ್-ಎನ್‌ಪಿಪಿ ನಾಲ್ವರು ಶಾಸಕರು ಬಿಜೆಪಿಗೆ ಸೇರ್ಪಡೆ
ಚುನಾವಣೆಗೆ ಮುನ್ನ ಅರುಣಾಚಲ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿಗೆ ಬಲ ತುಂಬುವ ನಿಟ್ಟಿನಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರು ಮತ್ತು ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಯ ಹಲವು ಶಾಸಕರು ಇಂದು ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಇಟಾನಗರ: ಚುನಾವಣೆಗೆ ಮುನ್ನ ಅರುಣಾಚಲ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿಗೆ ಬಲ ತುಂಬುವ ನಿಟ್ಟಿನಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರು ಮತ್ತು ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಯ ಹಲವು ಶಾಸಕರು ಭಾನುವಾರ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
60 ಸದಸ್ಯರ ವಿಧಾನಸಭೆಯಲ್ಲಿ ಈಗ ಕಾಂಗ್ರೆಸ್ ಮತ್ತು ಎನ್‌ಪಿಪಿ ಎರಡೂ ತಲಾ ಇಬ್ಬರು ಶಾಸಕರನ್ನು ಹೊಂದಿವೆ.
ಹಿರಿಯ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಕೇಂದ್ರ ಸಚಿವ ನಿನೊಂಗ್ ಎರಿಂಗ್ ಮತ್ತು ವಾಂಗ್ಲಿನ್ ಲೋವಾಂಗ್‌ಡಾಂಗ್, ಮತ್ತು ಎನ್‌ಪಿಪಿಯ ಮುಚು ಮಿಥಿ ಮತ್ತು ಗೋಕರ್ ಬಾಸರ್ ಅವರು ಪ್ರಧಾನ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಕೇಸರಿ ಪಕ್ಷವನ್ನು ಸೇರಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪೆಮಾ ಖಂಡು, ರಾಜ್ಯ ಬಿಜೆಪಿ ಅಧ್ಯಕ್ಷ ಬಿಯೂರಾಮ್ ವಾಗೆ ಉಪಸ್ಥಿತರಿದ್ದರು. ಈ ವರ್ಷಾಂತ್ಯದಲ್ಲಿ ಈಶಾನ್ಯ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಗಳು ಏಕಕಾಲದಲ್ಲಿ ನಡೆಯಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



