RCB vs GG: ಚಿನ್ನಸ್ವಾಮಿಯಲ್ಲಿ ಮಂಧಾನ ಮಿಂಚು, ಗುಜರಾತ್ ಜೈಂಟ್ಸ್ ವಿರುದ್ಧ ಆರ್‌ಸಿಬಿಗೆ ಜಯ
ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) 2024ರ ಎರಡನೇ ಆವೃತ್ತಿಯಲ್ಲಿ ಅತ್ಯುತ್ತಮ ಪ್ರದರ್ಶನ ಮುಂದುವರೆಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಂಗಳವಾರ ಗುಜರಾತ್ ಜೈಂಟ್ಸ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಗೆಲುವಿನ ಓಟ ಮುಂದುವರಿಸಿದೆ.

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಎರಡನೇ ಆವೃತ್ತಿಯಲ್ಲಿ ಅತ್ಯುತ್ತಮ ಪ್ರದರ್ಶನ ಮುಂದುವರೆಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಂಗಳವಾರ ಗುಜರಾತ್ ಜೈಂಟ್ಸ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಗೆಲುವಿನ ಓಟ ಮುಂದುವರಿಸಿದೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 5ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ (ಜಿಜಿ) ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಪಂದ್ಯಾವಳಿಯ ತನ್ನ ಎರಡನೇ ಜಯವನ್ನು ದಾಖಲಿಸಿತು.

ಟಾಸ್ ಗೆದ್ದ ಆರ್‌ಸಿಬಿ ನಾಯಕಿ ಸ್ಮೃತಿ ಮಂಧಾನ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಆರ್‌ಸಿಬಿ ಬೌಲರ್‌ಗಳ ಅತ್ಯುತ್ತಮ ದಾಳಿ ಮುಂದೆ ಮಂಕಾದ ಗುಜರಾತ್ ಜೈಂಟ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ ಕೇವಲ 107 ರನ್‌ಗಳಿಸಲಷ್ಟೇ ಶಕ್ತವಾಯಿತು.
ಬಳಿಕ ಗುಜರಾತ್ ಜೈಂಟ್ಸ್ ನೀಡಿದ್ದ ರನ್ ಗುರಿ ಬೆನ್ನತ್ತಿದ ಆರ್‌ಸಿಬಿ ಸ್ಮೃತಿ ಮಂಧಾನ ಅವರ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನದ ಸಹಾಯದಿಂದ ಸುಲಭ ಗೆಲುವು ಸಾಧಿಸಿತು. ಆರ್‌ಸಿಬಿ ಎರಡು ವಿಕೆಟ್ ಕಳೆದುಕೊಂಡು 12.3 ಓವರ್‌ಗಳಲ್ಲಿಯೇ 110 ರನ್ ಗಳಿಸಿ ಗೆಲುವಿನ ನಗೆ ಬೀರಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



