ಕ್ರಿಕೆಟ್

ಬಾಂಗ್ಲಾದೇಶ: ಸಂಸತ್ ಚುನಾವಣೆಯಲ್ಲಿ ಗೆದ್ದ ಕ್ರಿಕೆಟಿಗ ಶಾಕಿಬ್ ಅಲ್ ಹಸನ್ ನಿಂದ ಅಭಿಮಾನಿಗೆ ಕಪಾಳ ಮೋಕ್ಷ

ಬಾಂಗ್ಲಾದೇಶದ ಸ್ಟಾರ್ ಕ್ರಿಕೆಟಿಗ ಶಾಕಿಬ್ ಅಲ್ ಹಸನ್ ಸಂಸತ್ ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ಈ ಚುನಾವಣೆಯನ್ನು ಅಲ್ಲಿನ ವಿಪಕ್ಷಗಳು ಬಹಿಷ್ಕರಿಸಿದ್ದವು.

ಬಾಂಗ್ಲಾದೇಶ: ಸಂಸತ್ ಚುನಾವಣೆಯಲ್ಲಿ ಗೆದ್ದ ಕ್ರಿಕೆಟಿಗ ಶಾಕಿಬ್ ಅಲ್ ಹಸನ್ ನಿಂದ ಅಭಿಮಾನಿಗೆ ಕಪಾಳ ಮೋಕ್ಷ
ಕ್ರಿಕೆಟಿಗ ಶಾಕಿಬ್ ಅಲ್ ಹಸನ್
Published On :

ನವದೆಹಲಿ: ಬಾಂಗ್ಲಾದೇಶದ ಸ್ಟಾರ್ ಕ್ರಿಕೆಟಿಗ ಶಾಕಿಬ್ ಅಲ್ ಹಸನ್ ಸಂಸತ್ ಚುನಾವಣೆಯಲ್ಲಿ ಜಯಗಳಿಸಿದ್ದಾರೆ.  ಈ ಚುನಾವಣೆಯನ್ನು ಅಲ್ಲಿನ ವಿಪಕ್ಷಗಳು ಬಹಿಷ್ಕರಿಸಿದ್ದವು. 

36 ವರ್ಷದ ಆಲ್ ರೌಂಡರ್, ಮಗುರಾ ಕ್ಷೇತ್ರದಿಂದ 150,000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಶಾಕಿಬ್ ಆಡಳಿತಾರೂಢ ಪಕ್ಷದ ಪ್ರಧಾನಿ ಶೇಖ್ ಹಸೀನಾ ಅವರ ಪಕ್ಷ ಅವಾಮಿ ಲೀಗ್ ಪಕ್ಷದಿಂದ ಸ್ಪರ್ಧಿಸಿದ್ದರು, ಚುನಾವಣೆಯಲ್ಲಿ ತಮ್ಮ ಗೆಲುವಿನ ಬಗ್ಗೆ ಶಾಬಿಕ್ ಈ ವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. 

ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ 5 ನೇ ಬಾರಿಗೆ ಪ್ರಧಾನಿಯಾಗುವುದು ನಿಚ್ಚಳವಾಗಿದೆ. ಈ ಲೋಕಸಭಾ ಚುನಾವಣೆಯನ್ನು ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಕ್ಷ (ಬಿಎನ್ ಪಿ) ಬಹಿಷ್ಕರಿಸಿತ್ತು. 

ಈ ನಡುವೆ ಚುನಾವಣೆಯಲ್ಲಿ ಗೆದ್ದ ಶಾಕೀಬ್ ಅಭಿಯೊಬ್ಬರಿಗೆ ಕಪಾಳ ಮೋಕ್ಷ ಮಾಡಿರುವ ವೀಡಿಯೋ ವೈರಲ್ ಆಗತೊಡಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.