79 ವರ್ಷಗಳಲ್ಲಿ ಮೊದಲ ಬಾರಿಗೆ ಕೂಚ್ ಬಿಹಾರ್ ಟ್ರೋಫಿ ಗೆದ್ದ ಕರ್ನಾಟಕ: ಸಿಎಂ ಸಿದ್ದರಾಮಯ್ಯ ಅಭಿನಂದನೆ
ಕರ್ನಾಟಕದ 19 ವರ್ಷದೊಳಗಿನವರ ತಂಡವು 79 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕೂಚ್ ಬಿಹಾರ್ ಟ್ರೋಫಿ ಗೆದ್ದುಕೊಂಡಿದೆ.

ಬೆಂಗಳೂರು: ಕರ್ನಾಟಕದ 19 ವರ್ಷದೊಳಗಿನವರ ತಂಡವು 79 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕೂಚ್ ಬಿಹಾರ್ ಟ್ರೋಫಿ ಗೆದ್ದುಕೊಂಡಿದೆ.
ಶಿವಮೊಗ್ಗದ ಕೆಎಸ್ ಸಿಎ ಕ್ರೀಡಾಂಗಣದಲ್ಲಿ ಸೋಮವಾರ ಮುಂಬೈ ಎದುರು ನಡೆದ ಫೈನಲ್ ಪಂದ್ಯದಲ್ಲಿ ಆರಂಭಿಕ ಬ್ಯಾಟರ್ ಪ್ರಖರ್ ಚತುರ್ವೇದಿ ಅವರ ಅಜೇಯ 404 ರನ್ ಗಳ ನೆರವಿನಿಂದ ಕರ್ನಾಟಕ ಚಾಂಪಿಯನ್ ಆಯಿತು.
ವಿಜೇತ ಕರ್ನಾಟಕ ತಂಡಕ್ಕೆ ಕೆಎಸ್ ಸಿಎ ಅಧ್ಯಕ್ಷ ರಘುರಾಮ್ ಭಟ್ ಹಾಗೂ ಮಾಜಿ ಸಚಿವ ಡಿ.ಹೆಚ್. ಶಂಕರ್ ಮೂರ್ತಿ ರೂ.30 ಲಕ್ಷ ಚೆಕ್ ಹಾಗೂ ಟ್ರೋಫಿ ವಿತರಿಸಿದರು. ರನ್ನರ್ ಅಪ್ ಮುಂಬೈ ತಂಡ ರೂ. 15 ಲಕ್ಷ ಪಡೆಯಿತು.
79 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕೂಚ್ ಬಿಹಾರ್ ಟ್ರೋಫಿ ಗೆದ್ದ ಕರ್ನಾಟಕ ತಂಡಕ್ಕೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅಭಿನಂದನೆ ಸಲ್ಲಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ತಂಡ 890 ರನ್‌ಗಳ ದಾಖಲೆಯ ಮೊತ್ತ ಪೇರಿಸುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದೆ. ಯುವ ಆಟಗಾರರು ಮುಂದಿನ ದಿನಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲಿ ಎಂದು ಹಾರೈಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


