ಕ್ರಿಕೆಟ್

ದೆಹಲಿಗೆ ಬಂದಿಳಿದ T20 ವಿಶ್ವಕಪ್ ವಿಜೇತರು: ಹರ್ಷೋದ್ಘಾರಗಳ ನಡುವೆ ಸ್ವಾಗತ, ಇಂದು ಬೆಳಗ್ಗೆ ಪ್ರಧಾನಿ ಭೇಟಿ

ಟಿ20 ವಿಶ್ವಕಪ್ ವಿಜೇತ ಭಾರತೀಯ ಕ್ರಿಕೆಟ್ ತಂಡ ಬಾರ್ಬಡೋಸ್‌ನಲ್ಲಿ ಪ್ರಶಸ್ತಿ ಗೆದ್ದ ಐದು ದಿನಗಳ ನಂತರ ವಿಶೇಷವಾಗಿ ವ್ಯವಸ್ಥೆಗೊಳಿಸಲಾದ ಚಾರ್ಟರ್ ವಿಮಾನದಲ್ಲಿ ಇಂದು ಗುರುವಾರ ಬೆಳಗಿನ ಜಾವ ದೆಹಲಿಗೆ ಬಂದಿಳಿದಿದೆ.

ದೆಹಲಿಗೆ ಬಂದಿಳಿದ T20 ವಿಶ್ವಕಪ್ ವಿಜೇತರು: ಹರ್ಷೋದ್ಘಾರಗಳ ನಡುವೆ ಸ್ವಾಗತ, ಇಂದು ಬೆಳಗ್ಗೆ ಪ್ರಧಾನಿ ಭೇಟಿ
ಇಂದು ಬೆಳಗ್ಗೆ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3 ಗೆ ಭಾರತೀಯ ತಂಡ ಆಗಮಿಸಿದ ನಂತರ ರೋಹಿತ್ ಶರ್ಮಾ T2O ವಿಶ್ವಕಪ್ ಟ್ರೋಫಿಯನ್ನು ಎತ್ತಿ ಪ್ರೇಕ್ಷಕರಿಗೆ ತೋರಿಸುತ್ತಿರುವುದು
Published On :

ನವದೆಹಲಿ: ಟಿ20 ವಿಶ್ವಕಪ್ ವಿಜೇತ ಭಾರತೀಯ ಕ್ರಿಕೆಟ್ ತಂಡ ಬಾರ್ಬಡೋಸ್‌ನಲ್ಲಿ ಪ್ರಶಸ್ತಿ ಗೆದ್ದ ಐದು ದಿನಗಳ ನಂತರ ವಿಶೇಷವಾಗಿ ವ್ಯವಸ್ಥೆಗೊಳಿಸಲಾದ ಚಾರ್ಟರ್ ವಿಮಾನದಲ್ಲಿ ಇಂದು ಗುರುವಾರ ಬೆಳಗಿನ ಜಾವ ದೆಹಲಿಗೆ ಬಂದಿಳಿದಿದೆ. ವಿಶ್ವಕಪ್ ಮುಗಿದು 5 ದಿನಗಳಾದರೂ ಪ್ರತಿಕೂಲ ಹವಾಮಾನದಿಂದಾಗಿ ಭಾರತ ಕ್ರಿಕೆಟ್ ತಂಡಕ್ಕೆ ತವರಿಗೆ ಮರಳಲು ಸಾಧ್ಯವಾಗಿರಲಿಲ್ಲ.

ಇಂದು ದೆಹಲಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂರಾರು ಅಭಿಮಾನಿಗಳು, ತಮ್ಮ ನೆಚ್ಚಿನ ಆಟಗಾರರನ್ನು ಅಭಿನಂದಿಸುವ ಫಲಕಗಳನ್ನು ಹಿಡಿದು ರಾಷ್ಟ್ರಧ್ವಜವನ್ನು ಬೀಸುತ್ತಾ, ಜಯಶಾಲಿ ಆಟಗಾರರನ್ನು ಸ್ವಾಗತಿಸಲು ಕಾದು ನಿಂತಿದ್ದರು. ವಿಮಾನ ನಿಲ್ದಾಣದ ಹೊರಗೆ ಸರತಿ ಸಾಲಿನಲ್ಲಿ ನಿಲ್ಲಲು ಮಳೆ ಅಡ್ಡಿಪಡಿಸಿತು.

ಕ್ರಿಕೆಟಿಗ ರೋಹಿತ್ ಶರ್ಮಾ ನೇತೃತ್ವದ ತಂಡವು ತನ್ನ ಎರಡನೇ ಟಿ20 ವಿಶ್ವ ಪ್ರಶಸ್ತಿಯನ್ನು ದೇಶಕ್ಕೆ ಗೆದ್ದುಕೊಂಡಿತು, ಈ ಮೂಲಕ ಐಸಿಸಿ ಟ್ರೋಫಿಗಾಗಿ 11 ವರ್ಷಗಳ ಕಾಯುವಿಕೆ ಕಳೆದ ಶನಿವಾರ ಅಂತ್ಯವಾಗಿದೆ.

ಏರ್ ಇಂಡಿಯಾ ವಿಶೇಷ ಚಾರ್ಟರ್ ಫ್ಲೈಟ್ AIC24WC -- ಏರ್ ಇಂಡಿಯಾ ಚಾಂಪಿಯನ್ಸ್ 24 ವಿಶ್ವಕಪ್ -- ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಿಂದ ಭಾರತೀಯ ಸ್ಥಳೀಯ ಕಾಲಮಾನ ನಿನ್ನೆ ನಸುಕಿನ ಜಾವ 4:50 ರ ಸುಮಾರಿಗೆ ಟೇಕ್ ಆಫ್ ಆಗಿತ್ತು. 16 ಗಂಟೆಗಳ ತಡೆರಹಿತ ಪ್ರಯಾಣದ ನಂತರ ಇಂದು ಬೆಳಗಿನ ಜಾವ 6 ಗಂಟೆಗೆ (IST) ದೆಹಲಿಗೆ ಆಗಮಿಸಿತು.

Story image

ಭಾರತೀಯ ತಂಡ, ಅದರ ಸಹಾಯಕ ಸಿಬ್ಬಂದಿ, ಆಟಗಾರರ ಕುಟುಂಬಗಳು ಮತ್ತು ಕೆಲವು ಮಂಡಳಿಯ ಅಧಿಕಾರಿಗಳು, ಮಾಧ್ಯಮ ತಂಡದ ಸದಸ್ಯರು ವಿಮಾನದಲ್ಲಿದ್ದರು.

ಇಂದು ಬೆಳಗ್ಗೆ ಪ್ರಧಾನಿಗಳ ಭೇಟಿ: ಶನಿವಾರ ನಡೆದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಏಳು ರನ್‌ಗಳ ರೋಚಕ ಗೆಲುವು ಸಾಧಿಸುವ ಮೂಲಕ ಭಾರತ ತಂಡ ಇದುವರೆಗೆ ನಾಲ್ಕು ವಿಶ್ವಕಪ್ ಕಿರೀಟವನ್ನು ಗೆದ್ದುಕೊಂಡಿತು. ತಂಡದ ಆಟಗಾರರು ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವರ ನಿವಾಸದಲ್ಲಿ 9 ಗಂಟೆ ಸುಮಾರಿಗೆ ಭೇಟಿ ಮಾಡಲಿದ್ದಾರೆ.

ಇದರ ನಂತರ, ತಂಡವು ಮುಂಬೈಗೆ ತೆರಳಿ ತೆರೆದ ಬಸ್ ನಲ್ಲಿ ವಿಜಯೋತ್ಸವ ಪರೇಡ್‌ನಲ್ಲಿ ಭಾಗವಹಿಸಲಿದ್ದು, ನಂತರ ವಾಂಖೆಡೆ ಕ್ರೀಡಾಂಗಣದಲ್ಲಿ ಅಭಿನಂದನಾ ಸಮಾರಂಭ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.