2ನೇ T20 ಪಂದ್ಯ: 100 ರನ್ ಗಳಿಂದ ಜಿಂಬಾಬ್ವೆ ಸೋಲಿಸಿದ ಭಾರತ!
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 234 ರನ್ ಕಲೆಹಾಕಿತು. ಅಭಿಷೇಕ್ ಶರ್ಮಾ 45 ಎಸೆತಗಳಲ್ಲಿ 8 ಸಿಕ್ಸರ್, 7 ಬೌಂಡರಿಗಳೊಂದಿಗೆ ಶತಕ ಬಾರಿಸಿದರು.

ಹರಾರೆ: ಹರಾರೆ ಸ್ಪೋರ್ಟ್ಸ್ ಕ್ಲಬ್ ನಲ್ಲಿ ಭಾನುವಾರ ನಡೆದ ಎರಡನೇ ಟಿ-20 ಪಂದ್ಯದಲ್ಲಿ ಆತಿಥೇಯ ಜಿಂಬಾಬ್ವೆಯನ್ನು 100 ರನ್ ಗಳ ಅಂತರದಿಂದ ಭಾರತ ಸೋಲಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 234 ರನ್ ಕಲೆಹಾಕಿತು. ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ನಾಯಕ ಶುಭ್ ಮನ್ ಗಿಲ್ ಕೇವಲ 2 ರನ್ ಗಳಿಸಿ ಬ್ರಿಯಾನ್ ಬೆನೆಟ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಅಭಿಷೇಕ್ ಶರ್ಮಾ 45 ಎಸೆತಗಳಲ್ಲಿ 8 ಸಿಕ್ಸರ್, 7 ಬೌಂಡರಿಗಳೊಂದಿಗೆ ಶತಕ ಬಾರಿಸಿದರು.
ಇನ್ನು ಉಳಿದಂತೆ ಋತುರಾಜ್ ಗಾಯಕ್ವಾಡ್ 47 ಎಸೆತಗಳಲ್ಲಿ 11 ಬೌಂಡರಿ, 1 ಸಿಕ್ಸರ್ ಗಳೊಂದಿಗೆ ಅಜೇಯ 77 ರನ್ ಗಳಿಸಿದರು. ರಿಂಕ್ ಸಿಂಗ್ 22 ಎಸೆತಗಳಲ್ಲಿ 2 ಬೌಂಡರಿ, 5 ಸಿಕ್ಸರ್ ಗಳೊಂದಿಗೆ ಅಜೇಯ 48 ರನ್ ಗಳಿಸಿದರು.
ಭಾರತ ನೀಡಿದ ಬೃಹತ್ 234 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಜಿಂಬಾಬ್ವೆ ಪರ ವೆಸ್ಲಿ ಮಾಧೆವೆರೆ 43, ಬ್ರಿಯಾನ್ ಬೆನೆಟ್ 26, ಲ್ಯೂಕ್ ಜೊಂಗ್ವೆ 33, ಜೊನಾಥನ್ ಕ್ಯಾಂಪ್‌ಬೆಲ್ 10 ರನ್ ಗಳಿಸಿದ್ದು ಹೊರತುಪಡಿಸಿದರೆ ಬೇರೆ ಯಾವುದೇ ಆಟಗಾರರು 4ಕ್ಕಿಂತ ಹೆಚ್ಚು ರನ್ ಗಳಿಸಲಿಲ್ಲ. ಇದರಿಂದಾಗಿ ಜಿಂಬಾಬ್ವೆ 18.4 ಓವರ್ ಗಳಲ್ಲಿ 134 ರನ್ ಗಳಿಸಿ ಆಲೌಟ್ ಆಯಿತು.
ಭಾರತ ಪರ ಮುಕೇಶ್ ಕುಮಾರ್, ಅವೇಶ್ ಖಾನ್ ತಲಾ ಮೂರು ವಿಕೆಟ್ ಪಡೆದರೆ, ರವಿ ಬಿಷ್ಟೋಯ್ 2, ವಾಷಿಂಗ್ಟನ್ ಸುಂದರ್ 1 ವಿಕೆಟ್ ಪಡೆದರು. ಈ ಮೂಲಕ ಭಾರತ 100 ರನ್ ಗಳಿಂದ ಜಯಭೇರಿ ಬಾರಿಸಿತು. ಐದು ಪಂದ್ಯಗಳಲ್ಲಿ ಸರಣಿಯಲ್ಲಿ 1-1 ಅಂಕಗಳೊಂದಿಗೆ ಉಭಯ ತಂಡಗಳು ಸಮಬಲ ಸಾಧಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



