T20 World Cup: ಅಮೆರಿಕ ವಿರುದ್ಧ ಭಾರತಕ್ಕೆ 7 ವಿಕೆಟ್ ಜಯ, ಟೀಂ ಇಂಡಿಯಾ ಸೂಪರ್-8ಕ್ಕೆ ಲಗ್ಗೆ
2024ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಬುಧವಾರ ಅಮೆರಿಕ ವಿರುದ್ಧ ಭಾರತ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ನ್ಯೂಯಾರ್ಕ್: 2024ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಬುಧವಾರ ಅಮೆರಿಕ ವಿರುದ್ಧ ಭಾರತ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದ್ದು, ಈ ಮೂಲಕ ಸೂಪರ್ - 8 ಹಂತಕ್ಕೆ ಅರ್ಹತೆ ಪಡೆದಿದೆ.
ಇಂದು ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಮೆರಿಕ ತಂಡ, ನಿಗದಿತ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗೆ 110 ರನ್ ಗಳಿಸಿತು.
ಗೆಲುವಿಗೆ 111 ರನ್ ಗಳ ಗುರಿ ಬೆನ್ನಟ್ಟಿದ ಭಾರತ, ಸೂರ್ಯಕುಮಾರ್ ಯಾದವ್ ಮತ್ತು ಶಿವಂ ದುಬೆ ಅವರ ಅದ್ಭುತ ಜೊತೆಯಾಟದ ನೆರವಿನಿಂದ 18.2 ಓವರ್‌ಗಳಲ್ಲಿ ಮೂರು ವಿಕೆಟ್‌ಗೆ 111 ರನ್ ಗಳಿಸಿ ಜಯಭೇರಿ ಬಾರಿಸಿತು.
ಈ ಪಂದ್ಯಾವಳಿಯಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಮೂರನ್ನೂ ಗೆಲ್ಲುವ ಮೂಲಕ ಭಾರತ 6 ಅಂಕಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿ ಮುಂದುವರೆದಿದೆ. ಅಮೆರಿಕ ತಂಡ ಎರಡನೇ ಸ್ಥಾನದಲ್ಲೇ ಉಳಿದಿದೆ.
ಭಾರತದ ಪರ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮತ್ತೊಮ್ಮೆ ಉತ್ತಮ ಆರಂಭ ನೀಡಲು ವಿಫಲರಾದರು. ವಿರಾಟ್ ಕೊಹ್ಲಿ ಡಕ್ ಔಟಾದರೆ, ನಾಯಕ ರೋಹಿತ್ ಶರ್ಮಾ ಕೇವಲ 3 ರನ್‌ಗಳಿಗೆ ಔಟಾದರು. ನಂತರ ಬಂದ ರಿಷಭ್ ಪಂತ್ 20 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 18 ರನ್ ಗಳಿಸಿ ಬೌಲ್ಡ್ ಆದರು. ಆಗ ಜೊತೆಯಾದ ಸೂರ್ಯಕುಮಾರ್ ಯಾದವ್ ಮತ್ತು ಶಿವಂ ದುಬೆ ಜೋಡಿ ನಾಲ್ಕನೇ ವಿಕೆಟ್‌ಗೆ 72 ರನ್‌ಗಳ ಜೊತೆಯಾಟವಾಡಿತು ಮತ್ತು ಸಂಕಷ್ಟದಲ್ಲಿದ್ದ ಭಾರತ ತಂಡವನ್ನು ಗೆಲುವಿನ ಕಡೆಗೆ ಮುನ್ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



