T20 World Cup 2024: ಭಾರತ vs ಕೆನಡಾ ಪಂದ್ಯ ರದ್ದು, ಭಾರತ ಅಗ್ರಸ್ಥಾನ
ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಇಂದು ಭಾರತ ಹಾಗೂ ಕೆನಡಾ ನಡುವೆ ನಡೆಯಬೇಕಿದ್ದ ಪಂದ್ಯ ರದ್ದುಗೊಂಡಿದೆ.

ಫ್ಲಾರಿಡಾ: ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಇಂದು ಭಾರತ ಹಾಗೂ ಕೆನಡಾ ನಡುವೆ ನಡೆಯಬೇಕಿದ್ದ ಪಂದ್ಯ ರದ್ದುಗೊಂಡಿದೆ.
ಕಳೆದ ಕೆಲವು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ಮೈದಾನ ತೇವಗೊಂಡಿತ್ತು. ಅನೇಕ ಬಾರಿ ಮೈದಾನವನ್ನು ಪರಿಶೀಲಿಸಿದ ಅಧಿಕೃತರು ಅಂತಿಮವಾಗಿ ಪಂದ್ಯವನ್ನು ರದ್ದುಗೊಳಿಸಲು ನಿರ್ಧಾರ ಕೈಗೊಂಡರು. ಇದಕ್ಕೆ ಉಭಯ ತಂಡಗಳ ನಾಯಕರು ಒಪ್ಪಿಗೆ ಸೂಚಿಸಿದರು. ಹೀಗಾಗಿ ಉಭಯ ತಂಡಗಳು ಸಮಾನವಾಗಿ ಒಂದು ಅಂಕವನ್ನು ಪಡೆದುಕೊಂಡಿವೆ. ಇದರೊಂದಿಗೆ ಭಾರತ ಸತತ ಮೂರು ಗೆಲುವಿನೊಂದಿಗೆ ಎ' ಗುಂಪಿನಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದ್ದು, ಸೂಪರ್ ಎಂಟರ ಹಂತಕ್ಕೆ ಪ್ರವೇಶಿಸಿದೆ.
ಇದೇ ಗುಂಪಿನಲ್ಲಿ ನಾಲ್ಕು ಪಂದ್ಯಗಳಲ್ಲಿ ಎರಡು ಗೆಲುವು ಸಾಧಿಸಿರುವ ಯುಎಸ್ ಎ ಒಟ್ಟು ಐದು ಅಂಕಗಳೊಂದಿಗೆ ಎರಡನೇ ತಂಡವಾಗಿ ಸೂಪರ್ ಎಂಟರ ಹಂತಕ್ಕೆ ಪ್ರವೇಶಿಸಿದೆ. ಪಾಕಿಸ್ತಾನ ಮತ್ತು ಐರ್ಲೆಂಡ್ ತಂಡಗಳು ಟೂರ್ನಿಯಿಂದ ನಿರ್ಗಮಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



