ಕ್ರಿಕೆಟ್

ICC T20 World Cup 2024: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ ಭರ್ಜರಿ ಜಯ, ಸೆಮೀಸ್ ಗೆ ಹತ್ತಿರ!

ಐಸಿಸಿ ಟಿ0 ವಿಶ್ವಕಪ್ ಟೂರ್ನಿಯ ಬಾಂಗ್ಲಾದೇಶದ ವಿರುದ್ಧದ ಮಹತ್ವದ ಪಂದ್ಯದಲ್ಲಿ ಭಾರತ ಪುರುಷರ ಕ್ರಿಕೆಟ್ ತಂಡ ಭರ್ಜರಿ ಜಯ ದಾಖಲಸಿದೆ.

ICC T20 World Cup 2024: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ ಭರ್ಜರಿ ಜಯ, ಸೆಮೀಸ್ ಗೆ ಹತ್ತಿರ!
ಭಾರತ ತಂಡಕ್ಕೆ ಜಯ
Published On :

ಆ್ಯಂಟಿಗುವಾ: ಐಸಿಸಿ ಟಿ0 ವಿಶ್ವಕಪ್ ಟೂರ್ನಿಯ ಬಾಂಗ್ಲಾದೇಶದ ವಿರುದ್ಧದ ಮಹತ್ವದ ಪಂದ್ಯದಲ್ಲಿ ಭಾರತ ಪುರುಷರ ಕ್ರಿಕೆಟ್ ತಂಡ ಭರ್ಜರಿ ಜಯ ದಾಖಲಸಿದೆ.

ಭಾರತ ನೀಡಿದ 197 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಬಾಂಗ್ಲಾದೇಶ ತಂಡ ನಿಗಧಿತ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 146 ರನ್ ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ 50 ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು.

ಬಾಂಗ್ಲಾದೇಶ ಪರ ಶಾಂಟೋ 40 ರನ್ ಗಳಿಸಿದರೆ, ಟಿ ಹಸನ್ 29 ಮತ್ತು ರಿಷಾದ್ ಹೊಸೆನ್ 24 ರನ್ ಗಳಿಸಿದರು. ಉಳಿದ ಆಟಗಾರರಿಂದ ಹೇಳಿಕೊಳ್ಳುವಂತಹ ಬ್ಯಾಟಿಂಗ್ ಪ್ರದರ್ಶನ ಮೂಡಿಬರಲಿಲ್ಲ. ಇನ್ನು ಭಾರತದ ಪರ ಕುಲದೀಪ್ ಯಾದವ್ 3 ವಿಕೆಟ್ ಪಡೆದರೆ, ಜಸ್ ಪ್ರೀತ್ ಬುಮ್ರಾ ಮತ್ತು ಅರ್ಶ್ ದೀಪ್ ಸಿಂಗ್ ತಲಾ ವಿಕೆಟ್ ಪಡೆದರು. ಹಾರ್ದಿಕ್ ಪಾಂಡ್ಯಾ 1 ವಿಕೆಟ್ ಪಡೆದು ಬೌಲಿಂಗ್ ನಲ್ಲೂ ಮಿಂಚಿದರು.

ಬ್ಯಾಟಿಂಗ್ ನಲ್ಲಿ ಅರ್ಧಶತಕ ಸಿಡಿಸಿ ಬೌಲಿಂಗ್ ನಲ್ಲಿ 1 ವಿಕೆಟ್ ಪಡೆದ ಹಾರ್ದಿಕ್ ಪಾಂಡ್ಯಾ ಅರ್ಹವಾಗಿಯೇ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಸೆಮೀಸ್ ಗೆ ಭಾರತ

ಇನ್ನು ನಾಳೆ ನಡೆಯಲಿರುವ ಮಹತ್ವದ ಪಂದ್ಯದಲ್ಲಿ ಆಫ್ಘಾನಿಸ್ತಾನ ತಂಡ ಆಸ್ಟ್ರೇಲಿಯಾವನ್ನು ಮಣಿಸುವಲ್ಲಿ ವಿಫಲವಾದರೆ ಭಾರತ ತಂಡ ಸೆಮೀಸ್ ಹಂತಕ್ಕೇರಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.