ಮುರಳಿ, ವಾರ್ನ್ ಇರುವ 'ಎಲೈಟ್ ಗ್ರೂಪ್'ಗೆ ಆ್ಯಂಡರ್ಸನ್ ಎಂಟ್ರಿ; 700 ವಿಕೆಟ್ ಪಡೆದ ಜಗತ್ತಿನ ಮೊದಲ ವೇಗಿ
ಭಾರತದ ವಿರುದ್ಧ ಟೆಸ್ಟ್ ಸರಣಿಯಲ್ಲಿ ನಿರೀಕ್ಷೆಯಂತೆಯೇ ಇಂಗ್ಲೆಂಡ್ ವೇಗಿ ಜೇಮ್ಸ್ ಆ್ಯಂಡರ್ಸನ್ ಐತಿಹಾಸಿಕ ಸಾಧನೆ ಮಾಡಿದ್ದು, ಶ್ರೀಲಂಕಾದ ಸ್ಪಿನ್ ಲೆಜೆಂಡ್ ಮುತ್ತಯ್ಯ ಮುರಳೀಧರನ್ ಮತ್ತು ಆಸ್ಟ್ರೇಲಿಯಾದ ಮ್ಯಾಜಿಕಲ್ ಸ್ಪಿನ್ನರ್ ಶೇನ್ ವಾರ್ನ್ ಇರುವ ಎಲೈಟ್ ಗ್ರೂಪ್ ಸೇರಿದ್ದಾರೆ.

ಧರ್ಮಶಾಲಾ: ಭಾರತದ ವಿರುದ್ಧ ಟೆಸ್ಟ್ ಸರಣಿಯಲ್ಲಿ ನಿರೀಕ್ಷೆಯಂತೆಯೇ ಇಂಗ್ಲೆಂಡ್ ವೇಗಿ ಜೇಮ್ಸ್ ಆ್ಯಂಡರ್ಸನ್ ಐತಿಹಾಸಿಕ ಸಾಧನೆ ಮಾಡಿದ್ದು, ಶ್ರೀಲಂಕಾದ ಸ್ಪಿನ್ ಲೆಜೆಂಡ್ ಮುತ್ತಯ್ಯ ಮುರಳೀಧರನ್ ಮತ್ತು ಆಸ್ಟ್ರೇಲಿಯಾದ ಮ್ಯಾಜಿಕಲ್ ಸ್ಪಿನ್ನರ್ ಶೇನ್ ವಾರ್ನ್ ಇರುವ ಎಲೈಟ್ ಗ್ರೂಪ್ ಸೇರಿದ್ದಾರೆ.
ಧರ್ಮಶಾಲಾ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಜೇಮ್ಸ್ ಆ್ಯಂಡರ್ಸನ್ ಅವರು ಕುಲ್ದೀಪ್ ಯಾದವ್ ಅವರ ವಿಕೆಟ್ ಕೀಳುವ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ 700 ವಿಕೆಟ್ಗಳನ್ನು ಪೂರ್ತಿಗೊಳಿಸಿದರು. ಆ ಮೂಲಕ ಈ ಸಾಧನೆಗೈದ ವಿಶ್ವದ ಮೂರನೇ ಹಾಗೂ ಮೊದಲ ವೇಗಿ ಎಂಬ ಹಿರಿಮೆಗೆ ಪಾತ್ರರಾದರು. ಹೈದರಾಬಾದ್ನಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುವ ಅವಕಾಶವನ್ನು ಸಿಗಲಿಲ್ಲ. ಆದರೆ, ನಂತರದ ಎಲ್ಲ ಪಂದ್ಯಗಳಲ್ಲಿ ಆಡಿದ ಜೇಮ್ಸ್ ಆಂಡರ್ಸನ್ ಅಬ್ಬರಿಸಿ ಐತಿಹಾಸಿಕ ದಾಖಲೆಗೆ ಪಾತ್ರರಾಗಿದ್ದಾರೆ.
ಧರ್ಮಶಾಲಾದಲ್ಲಿ ಎರಡು ವಿಕೆಟ್ ಪಡೆಯುವ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಜೇಮ್ಸ್ ಆ್ಯಂಡರ್ಸನ್ 700 ವಿಕೆಟ್ ಪಡೆದ ಸಾಧನೆಯನ್ನು ಮಾಡಿದರು.
ಅಂದಹಾಗೆ ರೋಹಿತ್ ಶರ್ಮ ಅವರು ಬೆನ್ನು ಮೂಳೆಯ ನೋವಿನಿಂದಾಗಿ ಮೂರನೇ ದಿನದಾಟದಿಂದ ಹೊರಗುಳಿದರು. ಹೀಗಾಗಿ ಉಪನಾಯಕ ಜಸ್ಪ್ರೀತ್ ಬುಮ್ರಾ ತಂಡವನ್ನು ಮುನ್ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



