WPL 2024: ಮುಂಬೈ ವಿರುದ್ಧ ಗೆದ್ದು RCB ಪ್ಲೇಆಫ್‌ಗೆ ಪ್ರವೇಶ!
ಆರ್‌ಸಿಬಿ ಆಟಗಾರ್ತಿ ಎಲ್ಲಿಸ್ ಪೆರಿಯ ಸ್ಮರಣೀಯ ಆಲ್‌ರೌಂಡ್ ಪ್ರದರ್ಶನದಿಂದಾಗಿ RCB ಮುಂಬೈ ಇಂಡಿಯನ್ಸ್ ಅನ್ನು 30 ಎಸೆತಗಳು ಬಾಕಿ ಇರುವಂತೆಯೇ ಏಳು ವಿಕೆಟ್‌ಗಳಿಂದ ಸೋಲಿಸಿ ಪ್ಲೇಆಫ್‌ಗೆ ಪ್ರವೇಶಿಸಿದೆ.

ನವದೆಹಲಿ: ಆರ್‌ಸಿಬಿ ಆಟಗಾರ್ತಿ ಎಲ್ಲಿಸ್ ಪೆರಿಯ ಸ್ಮರಣೀಯ ಆಲ್‌ರೌಂಡ್ ಪ್ರದರ್ಶನದಿಂದಾಗಿ RCB ಮುಂಬೈ ಇಂಡಿಯನ್ಸ್ ಅನ್ನು 30 ಎಸೆತಗಳು ಬಾಕಿ ಇರುವಂತೆಯೇ ಏಳು ವಿಕೆಟ್‌ಗಳಿಂದ ಸೋಲಿಸಿ ಪ್ಲೇಆಫ್‌ಗೆ ಪ್ರವೇಶಿಸಿದೆ.
ಪೆರ್ರಿ ಮೊದಲ 15 ರನ್‌ಗಳಿಗೆ ಆರು ವಿಕೆಟ್‌ಗಳನ್ನು ಪಡೆಯುವ ಮೂಲಕ ಮಹಿಳಾ ಪ್ರೀಮಿಯರ್ ಲೀಗ್‌ನ ಇತಿಹಾಸದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದರು. ಆ ಬಳಿಕ ಅವರು ಅಜೇಯ 40 ರನ್ ಗಳಿಸಿದರು.
ಪೆರಿ-ರಿಚಾ 76 ರನ್‌ಗಳ ಜೊತೆಯಾಟ
114 ರನ್‌ಗಳ ಗುರಿ ಬೆನ್ನಟ್ಟಿದ ಆರ್‌ಸಿಬಿ 39 ರನ್‌ಗಳಿಗೆ ಮೂರು ವಿಕೆಟ್ ಕಳೆದುಕೊಂಡಿತ್ತು. ನಾಯಕಿ ಸ್ಮೃತಿ ಮಂಧಾನ (11), ಮೊಲಿನಿಯಕ್ಸ್ (9), ಡಿವೈನ್ (4) ವಿಕೆಟ್ ಪತನದ ನಂತರ ಪೆರ್ರಿಗೆ ರಿಚಾ ಘೋಷ್ ಉತ್ತಮ ಬೆಂಬಲ ನೀಡಿದರು. ಇವರಿಬ್ಬರೂ 53 ಎಸೆತಗಳಲ್ಲಿ 76 ರನ್‌ಗಳ ಮುರಿಯದ ಜೊತೆಯಾಟ ನೀಡಿದರು. ಪೆರ್ರಿ 38 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 40 ರನ್ ಗಳಿಸಿದರೆ, ರಿಚಾ 28 ಎಸೆತಗಳಲ್ಲಿ ನಾಲ್ಕು ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ ಅಜೇಯ 36 ರನ್ ಗಳಿಸಿದರು. ಮುಂಬೈ ಮತ್ತು ದೆಹಲಿ ತಂಡಗಳು ಈಗಾಗಲೇ ಪ್ಲೇ ಆಫ್‌ಗೆ ಅರ್ಹತೆ ಪಡೆದಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



