IPL 2024: ಚೆನ್ನೈ ವಿರುದ್ಧ ಪಂದ್ಯ ಸೋತ ಬೆನ್ನಲ್ಲೇ ನಿವೃತ್ತಿಯ ಸುಳಿವು ನೀಡಿದ RCB ಆಟಗಾರ
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಶುಕ್ರವಾರ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ 38 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದರು. ಆದರೂ ಈ ಪಂದ್ಯದಲ್ಲಿ RCB ತಂಡ ಸೋತಿತ್ತು.

ಚೆನ್ನೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಶುಕ್ರವಾರ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ 38 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದರು. ಆದರೂ ಈ ಪಂದ್ಯದಲ್ಲಿ RCB ತಂಡ ಸೋತಿತ್ತು.
ಇತ್ತೀಚೆಗಷ್ಟೇ ಮುಕ್ತಾಯಗೊಂಡ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ವೇಳೆ ಕಾಮೆಂಟರಿ ಮಾಡುವುದರಲ್ಲಿ ನಿರತರಾಗಿದ್ದಾರೆ. ಈ ಅವಧಿಯಲ್ಲಿ ಅಭ್ಯಾಸಕ್ಕೆ ಸಮಯ ಕಂಡುಕೊಳ್ಳುವುದು ತುಂಬಾ ಕಷ್ಟಕರವಾಗಿತ್ತು ಎಂದು ಅವರು ಒಪ್ಪಿಕೊಂಡರು. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಬ್ಯಾಟ್ಸ್‌ಮನ್ ಕಾರ್ತಿಕ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 26 ಎಸೆತಗಳಲ್ಲಿ ಅಜೇಯ 38 ರನ್ ಗಳಿಸಿದರು. ಈ ಕಾರಣದಿಂದಾಗಿ ಅವರ ತಂಡವು 6 ವಿಕೆಟ್‌ಗೆ 173 ರನ್‌ಗಳ ಗೌರವಾನ್ವಿತ ಸ್ಕೋರ್ ಗಳಿಸುವಲ್ಲಿ ಯಶಸ್ವಿಯಾಗಿತ್ತು.
ಪಂದ್ಯದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾರ್ತಿಕ್, “ಕಾಮೆಂಟರಿ ಮಾಡುವಾಗ ಟೆಸ್ಟ್ ಪಂದ್ಯಗಳ ನಡುವೆ ಕ್ರಿಕೆಟ್ ಆಡಲು ಸಮಯವನ್ನು ಹುಡುಕುವುದು ತುಂಬಾ ಸವಾಲಿನ ಸಂಗತಿಯಾಗಿದೆ. ಸಿಕ್ಕ ಸಮಯದಲ್ಲಿ ಕಷ್ಟಪಟ್ಟು ದುಡಿಯುತ್ತಿದ್ದೆ. ಹಾಗಾಗಿ ಮೊದಲ ಪಂದ್ಯದಲ್ಲೇ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾದದ್ದು ಖುಷಿ ತಂದಿದೆ ಎಂದರು.
38ರ ಹರೆಯದ ಆಟಗಾರ ತಮ್ಮ ತಂಡ ಪ್ಲೇಆಫ್‌ಗೆ ತಲುಪಬೇಕು ಮತ್ತು ಚೆಪಾಕ್‌ನಲ್ಲಿ ತಮ್ಮ ಕೊನೆಯ ಪಂದ್ಯವನ್ನು ಆಡುವ ಅವಕಾಶ ಸಿಗುತ್ತದೆ ಎಂದು ಆಶಿಸಿದ್ದಾರೆ. ಚೆನ್ನೈನಲ್ಲಿ ಇಂದು ತಮ್ಮ ಕೊನೆಯ ಪಂದ್ಯವನ್ನು ಆಡಿದ್ದೀರಾ ಎಂದು ಪ್ರಶ್ನಿಸಿದ್ದಕ್ಕೆ ಅದನ್ನು ಸಮಯ ಮಾತ್ರ ಹೇಳುತ್ತದೆ. ಆದರೆ ನಾನು ಅದನ್ನು ನಿಜವಾಗಿಯೂ ಬಯಸುವುದಿಲ್ಲ. ಏಕೆಂದರೆ ಪ್ಲೇಆಫ್ ಪಂದ್ಯಗಳನ್ನು ಇಲ್ಲಿ ಆಡಲಾಗುತ್ತದೆ. ನಾನು ಮತ್ತೊಮ್ಮೆ ಚೆಪಕ್ ಕ್ರೀಡಾಂಗಣದಲ್ಲಿ ಆಡಬೇಕಾದರೆ ನಮ್ಮ ತಂಡ ಪ್ಲೇ ಆಫ್ ಗೆ ಬರಲಿ ಎಂದು ಆಶಿಸುತ್ತೇನೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



