ಕ್ರಿಕೆಟ್

ಐಪಿಎಲ್ 2024: 31 ರನ್ ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದ ಸನ್ ರೈಸರ್ಸ್ ಹೈದರಾಬಾದ್

ಹೈದರಾಬಾದ್ ನಲ್ಲಿ ನಡೆದ ಐಪಿಎಲ್ 2024 8 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಹೈದರಾಬಾದ್ ತಂಡ 31 ರನ್ ಗಳಿಂದ ಮಣಿಸಿದೆ.

ಐಪಿಎಲ್ 2024: 31 ರನ್ ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದ ಸನ್ ರೈಸರ್ಸ್ ಹೈದರಾಬಾದ್
ಹೈದರಾಬಾದ್ ತಂಡ — online desk
Published On :

ಹೈದರಾಬಾದ್: ಹೈದರಾಬಾದ್ ನಲ್ಲಿ ನಡೆದ ಐಪಿಎಲ್ 2024 8 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಹೈದರಾಬಾದ್ ತಂಡ 31 ರನ್ ಗಳಿಂದ ಮಣಿಸಿದೆ.

ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಮುಂಬೈ ಇಂಡಿಯನ್ಸ್ ತಂಡದ ಬೌಲರ್ ಗಳು ಹೈದರಾಬಾದ್ ತಂಡದ ಬ್ಯಾಟ್ಸ್ ಮನ್ ಗಳನ್ನು ನಿಯಂತ್ರಿಸುವಲ್ಲಿ ಹೈರಾಣಾದರು. ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ 13 ಎಸೆತಗಳಲ್ಲಿ 11 ರನ್ ಗಳಿಸಿದರೆ, ಟ್ರಾವಿಸ್ ಹೆಡ್ (24 ಎಸೆತಗಳಲ್ಲಿ 62 ರನ್) ಅಭಿಷೇಕ್ ಶರ್ಮಾ (23 ಎಸೆತಗಳಲ್ಲಿ 63 ರನ್) ಜೋಡಿ ತಂಡ ದಾಖಲೆಯ ಮೊತ್ತವನ್ನು ಗಳಿಸಲು ನೆರವಾಯಿತು.

ಬಳಿಕ ಐಡೆನ್ ಮಾರ್ಕ್ರಾಮ್ (28 ಎಸೆತಗಳಲ್ಲಿ 42 ರನ್) ಹೆನ್ರಿಕ್ ಕ್ಲಾಸೆನ್ (34 ಎಸೆತಗಳಲ್ಲಿ 80 ರನ್) ಗಳಿಸಿದ್ದು, ತಂಡ ಬೃಹತ್ ಮೊತ್ತದ ರನ್ ಗಳಿಸಲು ಸಾಧ್ಯವಾಯಿತು. 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಹೈದರಾಬಾದ್ ತಂಡ ದಾಖಲೆಯ 277 ರನ್ ಗಳಿಸಿತು.

ಬೃಹತ್ ಮೊತ್ತವನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ ಎದುರಾಳಿಗಳಿಗೆ ಪ್ರಬಲ ಪೈಪೋಟಿ ನೀಡುವ ಸೂಚನೆ ನೀಡಿತ್ತು. ಆದರೆ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 246 ರನ್ ಗಳಿಸಿ 31 ರನ್ ಗಳಿಂದ ಸೋಲೊಪ್ಪಿಕೊಂಡಿತು. ಅಭಿಷೇಕ್ ಶರ್ಮಾ ಪಂದ್ಯಪುರುಷೋತ್ತಮ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.