ಕ್ರಿಕೆಟ್

ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿ ಕೊಹ್ಲಿ ಕಾಲು ಹಿಡಿದಿದ್ದ ವ್ಯಕ್ತಿ ಪೊಲೀಸರ ವಶಕ್ಕೆ

ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಕಾಲು ಹಿಡಿದಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿ ಕೊಹ್ಲಿ ಕಾಲು ಹಿಡಿದಿದ್ದ ವ್ಯಕ್ತಿ ಪೊಲೀಸರ ವಶಕ್ಕೆ
ಪಂದ್ಯದ ವೇಳೆ ಕೊಹ್ಲಿ ಕಾಲು ಹಿಡಿದಿರುವ ಅಭಿಮಾನಿ.
Published On :

ಬೆಂಗಳೂರು: ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಕಾಲು ಹಿಡಿದಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಐಪಿಎಲ್ ಪಂದ್ಯ ನಡೆಯುತ್ತಿದ್ದ ವೇಳೆ ಅಭಿಮಾನಿಯೊಬ್ಬ ಹೈ ಸೆಕ್ಯೂರಿಟಿ ಮಧ್ಯೆಯೂ ಮೈದಾನದೊಳಗೆ ಒಳಗಡೆ ನುಗ್ಗಿ ಕೊಹ್ಲಿ ಕಾಲು ಹಿಡಿದು ಹುಚ್ಚಾಟ ನಡೆಸಿದ್ದ.

ಕೊಹ್ಲಿ ಬರುವುದನ್ನೇ ಕಾಯುತ್ತಿದ್ದ ಅಭಿಮಾನಿ ಎಲ್ಲಾ ರೂಲ್ಸ್‌ಗಳನ್ನು ಮುರಿದು ಕ್ರೀಸ್ ಒಳಗಡೆ ನುಗ್ಗಿ ಏಕಾಏಕಿ ಕೊಹ್ಲಿ ಕಾಲಿಗೆ ಬಿದ್ದು ಬಳಿಕ ಅಪ್ಪಿಕೊಳ್ಳಲು ಪ್ರಯತ್ನಿಸಿದ್ದ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಘಟನೆ ಬಳಿಕ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಹ್ಲಿ ನೋಡುವ ಸಲುವಾಗಿ ರಾಯಚೂರಿನಿಂದ ರೈಲಿನಲ್ಲಿ ಬಂದಿದ್ದು, 3000 ರೂಪಾಯಿಗೆ ಟಿಕೆಟ್ ಖರೀದಿಸಿದ್ದ ಎಂದು ತಿಳಿದುಬಂದಿದೆ.

ಇದೀಗ ಈತನ ವಿರುದ್ಧ ಐಪಿಸಿ ಸೆಕ್ಷನ್ 447, ಐಪಿಸಿ ಸೆಕ್ಷನ್ 290 ಮತ್ತು ಐಪಿಸಿ ಸೆಕ್ಷನ್ 353 ಅಡಿಯಲ್ಲಿ ಪ್ರಕರಣ ದಾಖಲಾಗಿದೆ, ಕಬ್ಬನ್ ಪಾರ್ಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವ್ಯಕ್ತಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.