ಕ್ರಿಕೆಟ್

IPL 2024: RCB ವಿರುದ್ಧ KKR ಗೆ 7 ವಿಕೆಟ್ ಭರ್ಜರಿ ಜಯ

ಐಪಿಎಲ್ 2024ರ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಮತ್ತೊಂದು ಆಘಾತಕಾರಿ ಸೋಲು ಎದುರಾಗಿದೆ.

IPL 2024: RCB ವಿರುದ್ಧ KKR ಗೆ 7 ವಿಕೆಟ್ ಭರ್ಜರಿ ಜಯ
Published On :

ಬೆಂಗಳೂರು: ಐಪಿಎಲ್ 2024ರ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಮತ್ತೊಂದು ಆಘಾತಕಾರಿ ಸೋಲು ಎದುರಾಗಿದೆ.

ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೃಹತ್ ಮೊತ್ತದ ಹೊರತಾಗಿಯೂ 7 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.

ಆರ್ ಸಿಬಿ ನೀಡಿದ 183 ರನ್ ಗಳ ಗುರಿಯನ್ನು ಕೋಲ್ಕತಾ ತಂಡ ಕೇವಲ 3 ವಿಕೆಟ್ ನಷ್ಟಕ್ಕೆ 16.5 ಓವರ್ ನಲ್ಲಿ 186 ರನ್ ಗಳಿಸಿ ಗುರಿ ಮುಟ್ಟಿತು. ಆ ಮೂಲಕ 7 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ. ಕೆಕೆಆರ್ ಪರ ವೆಂಕಟೇಶ್ ಅಯ್ಯರ್ (50) ಅರ್ಧಶತಕ, ಸುನಿಲ್ ನರೇನ್ 47 ರನ್, ಫಿಲಿಪ್ ಸಾಲ್ಟ್ 30ರನ್, ಶ್ರೇಯಸ್ ಅಯ್ಯರ್ ಅಜೇಯ 39 ರನ್ ಗಳಿಸಿ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.